ಈಗ ನಾವು ಚಾಂಪಿಯನ್ಸ್ ಟ್ರೋಫಿ ವಿಚಾರಕ್ಕೆ ಬರುವುದಾದರೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಇನ್ನೊಂದೆಡೆಗೆ ಭಾರತ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಐಸಿಸಿ ಚಾಂಪಿಯನ್ ಟ್ರೋಫಿ ಪಂದ್ಯವು ಇದೇ ತಿಂಗಳ 19 ರಂದು ಪ್ರಾರಂಭವಾಗಲಿದ್ದು 8 ತಂಡಗಳ ನಡುವೆ ಚಾಂಪಿಯನ್ ಟ್ರೋಪಿಯ ಕದನ ನಡೆಯಲಿದೆ. ಇದರಲ್ಲಿ ಯಾರು ಫೈನಲ್ ಹಂತಕ್ಕೆ ತಲುಪುತ್ತಾರೆ ಎನ್ನುವ ಕುರಿತು ಭವಿಷ್ಯವಾಣಿ ನುಡಿದಿದೆ.
2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದಂತೆ ಹುಟ್ಟಿಕೊಂಡಿರುವ ಸಮಸ್ಯೆಗಳಿಗೆ ಇದುವರೆಗೂ ಯಾವುದೇ ಪರಿಹಾರ ಕಂಡುಕೊಳ್ಳಲಾಗಿಲ್ಲ. ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯುತ್ತಿರುವ ಈ ಪ್ರತಿಷ್ಠೆಯ ಹೋರಾಟದಿಂದಾಗಿ ಇದೀಗ ಐಸಿಸಿ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿಕೊಂಡಿದೆ.
Team India: ಜೂನ್ 28 ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮರೆಯಲಾಗದ ದಿನ. 11 ವರ್ಷಗಳ ಸುದೀರ್ಘ ಕಾಯುವಿಕೆಯನ್ನು ಕೊನೆಗೊಳಿಸಿ, ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ T20 ವಿಶ್ವಕಪ್ 2024 ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಆಟ ಪ್ರದರಶಿಸುವ ಮೂಲಕ ಭಾರತ ತಂಡ ಜಯ ದಾಖಲಿಸಿದೆ.
ಈ ಬಾರಿಯ ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವ ಇಂಗ್ಲೆಂಡ್ನ ಕನಸು ಭಗ್ನಗೊಂಡಿದೆ. ವಿಶ್ವಕಪ್ನಲ್ಲಿ ಇಂಗ್ಲೆಂಡ್ ತಂಡ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು, 5ರಲ್ಲಿ ಸೋಲು ಕಂಡಿದೆ. ಈಗ ಇಂಗ್ಲೆಂಡ್ ಈ ಟೂರ್ನಿಯಲ್ಲಿ ಇನ್ನೂ 3 ಪಂದ್ಯಗಳನ್ನು ಆಡಬೇಕಿದ್ದು, ವಿಶ್ವಕಪ್ ಗೆಲ್ಲುವುದು ಅವರ ಗುರಿಯಲ್ಲ, ಬದಲಾಗಿ 2025ರ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯುವುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.