ಇಂಗ್ಲೆಂಡಿನ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2019 ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 50 ಓವರ್ ಗಳಲ್ಲಿ 8 ವಿಕೆಟ್ 241 ರನ್ ಗಳಿಸಿದೆ.
ವಿಶ್ವಕಪ್ 2019 ಇದೀಗ ಅಂತಿಮ ಹಂತವನ್ನು ತಲುಪಿದ್ದು ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ಸ್ ಪಂದ್ಯ ಇಂಗ್ಲೆಂಡ್ ನ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ.
ನ್ಯೂಜಿಲೆಂಡ್ನ ಆಲ್ರೌಂಡರ್ ಜೇಮ್ಸ್ ನೀಶಮ್ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ತಮ್ಮ ವಿಶ್ವಕಪ್ 2019 ರ ಫೈನಲ್ ಪಂದ್ಯದ ಟಿಕೆಟ್ಗಳನ್ನು ಅಧಿಕೃತ ವೇದಿಕೆಗಳಲ್ಲಿ ಮರು ಮಾರಾಟ ಮಾಡುವಂತೆ ಕೋರಿದರು, ಆ ಮೂಲಕ ನಿಜವಾದ ಅಭಿಮಾನಿಗಳಿಗೆ ತಮ್ಮ ತಂಡಗಳ ಆಟವನ್ನು ವೀಕ್ಷಿಸಲು ಅವಕಾಶ ನೀಡುವಂತೆ ಒತ್ತಾಯಿಸಿದರು.
ಮ್ಯಾಂಚೆಸ್ಟರ್ನಲ್ಲಿ ಬುಧವಾರದಂದು ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೋತ ನಂತರ ಭಾರತ ವಿಶ್ವಕಪ್ ನಿಂದ ನಿರ್ಗಮಿಸಿದೆ. ಆದಾಗ್ಯೂ, ವಿರಾಟ್ ಕೊಹ್ಲಿ ನೇತೃತ್ವದ ತಂಡ, ಸಿಬ್ಬಂದಿ ಮತ್ತು ಭಾರತೀಯ ಆಟಗಾರರ ಕುಟುಂಬಗಳು ವಿಶ್ವಕಪ್ ಫೈನಲ್ ವರೆಗೆ ಇಂಗ್ಲೆಂಡ್ ನಲ್ಲೆ ಉಳಿಯಲಿದ್ದಾರೆ ಎಂದು ವರದಿಯಾಗಿದೆ.
ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತವನ್ನು18 ರನ್ಗಳಿಂದ ಸೋಲಿಸಿ ನ್ಯೂಜಿಲೆಂಡ್ ತಂಡ ವಿಶ್ವಕಪ್ ಫೈನಲ್ ತಲುಪಿದೆ.
ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ 240 ರನ್ ಗುರಿ ಬೆನ್ನತ್ತಿದ ಭಾರತ ತಂಡ 5 ರನ್ ಗಳ ಅಂತರದಲ್ಲಿ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ತಂಡವು 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 239 ರನ್ ಗಳಿಸಿದೆ.
ಈಗ ಭಾರತ-ನ್ಯೂಜಿಲೆಂಡ್ ತಂಡಗಳ ನಡುವಿನ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯಾದ ಹಿನ್ನಲೆಯಲ್ಲ, ಒಂದು ವೇಳೆ ಫೈನಲ್ ಪಂದ್ಯದಲ್ಲೂ ಹೀಗೆ ಆದರೆ ವಿಶ್ವಕಪ್ ಟ್ರೋಫಿಯನ್ನು ಯಾರಿಗೆ ನೀಡಲಾಗುತ್ತೆ ಎನ್ನುವ ವಿಚಾರವಾಗಿ ಈಗ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ 2019 ರ ಮೊದಲ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ.
ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ನ್ಯೂಜಿಲೆಂಡ್ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.
ವಿರಾಟ್ ಕೊಹ್ಲಿ ನೇತೃತ್ವದ ಭಾರತ ಮಂಗಳವಾರ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ನಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2019 ರ ಮೊದಲ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸುತ್ತಿದೆ. ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಭಾರತ ವಿರುದ್ಧ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ನ ಮೊದಲ ಸೆಮಿಫೈನಲ್ನಲ್ಲಿ ಭಾರತವು ನ್ಯೂಜಿಲೆಂಡ್ ತಂಡವನ್ನುಎದುರಿಸಲಿದೆ. ಆದರೆ ಈಗ ಈ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶನಿವಾರದಂದು ಹೆಡ್ಲಿಂಗ್ನಲ್ಲಿ ನಡೆಯುತ್ತಿರುವ ವಿಶ್ವಕಪ್ 2019 ರ ಭಾರತದ ಕೊನೆಯ ಲೀಗ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಶ್ರೀಲಂಕಾದ ದಿಮುತ್ ಕರುಣರತ್ನೆ ಅವರನ್ನು ಔಟ್ ಮಾಡುವ ಮೂಲಕ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ 100 ವಿಕೆಟ್ ಪಡೆದ ಎರಡನೇ ಅತಿ ವೇಗದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಲೀಡ್ಸ್ ನಲ್ಲಿನ ಹೆಡಿಂಗ್ಲಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ತಂಡವು ಭಾರತದ ವಿರುದ್ಧ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿದೆ.
ರೋಹಿತ್ ಶರ್ಮಾ ಅವರು 2019 ರ ಐಸಿಸಿ ಕ್ರಿಕೆಟ್ ವಿಶ್ವಕಪ್ನಲ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಸುದ್ದಿಯಲ್ಲಿದ್ದಾರೆ. ಶರ್ಮಾ ಪ್ರಸ್ತುತ ಏಳು ಇನ್ನಿಂಗ್ಸ್ಗಳಲ್ಲಿ 544 ರನ್ ಗಳಿಸಿಸುವ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನ್ನುವ ಖ್ಯಾತಿ ಪಡೆದಿದ್ದಾರೆ.
ಅಫ್ಘಾನಿಸ್ತಾನ ಬ್ಯಾಟ್ಸ್ಮನ್ ಇಕ್ರಮ್ ಅಲಿ ಖಿಲ್ ಗುರುವಾರದಂದು ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶ್ವಕಪ್ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
2019 ರ ವಿಶ್ವಕಪ್ನಲ್ಲಿ ಎಂ.ಎಸ್.ಧೋನಿ ಆಟದ ಬಗ್ಗೆ ಹಲವು ತಜ್ಞರು ಪ್ರಶ್ನಿಸಿದ್ದಾರೆ. ಆದರೆ ಇಂದಿಗೂ ಕೂಡ ತಂಡ ಆಟಗಾರರಿಗೆ ಧೋನಿ ಫೇವರೆಟ್, ಇದಕ್ಕೆ ಪೂರಕ ಎನ್ನುವಂತೆ ಇತ್ತೀಚಿಗೆ ವಿರಾಟ್ ಕೊಹ್ಲಿ, ಹಾಗೂ ರೋಹಿತ್ ಶರ್ಮಾ ಅವರ ಹೇಳಿಕೆಗಳೇ ಇದಕ್ಕೆ ಸಾಕ್ಷಿ ಎನ್ನಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.