Lakshmi putra:ಅಂಬಾರಿ, ಅದ್ಧೂರಿ, ಐರಾವತ, ರಾಟೆಯಂತಹ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಎ.ಪಿ.ಅರ್ಜುನ್ ತಮ್ಮದೇ ಎಪಿ ಅರ್ಜುನ್ ಫಿಲ್ಮಂಸ್ ನಡಿ ಕಿಸ್, ಅದ್ಧೂರಿ ಲವರ್ಸ್ ನಂತಹ ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ಇದೇ ಎಪಿ ಅರ್ಜುನ್ ಫಿಲ್ಮಂಸ್ ನ ಮೂರನೇ ಸಿನಿಮಾ ಅನೌನ್ಸ್ ಆಗಿದೆ.
Sanju weds Geeta: ನಾಗಶೇಖರ್ ನಿರ್ದೇಶನದ "ಸಂಜು ವೆಡ್ಸ್ ಗೀತಾ-2" ಜ.10 ರಂದೇ ಬಿಡುಗಡೆಯಾಗಬೇಕಿತ್ತು. ಆದರೆ ೫ ವರ್ಷಗಳ ಹಿಂದೆ ನಾಗಶೇಖರ್ ನಿರ್ದೇಶಿಸಿದ್ದ ತೆಲುಗು ಚಿತ್ರದ ನಿರ್ಮಾಪಕರು ಹೈದರಾಬಾದ್ ಸಿವಿಲ್ ಕೋರ್ಟ್ ನಲ್ಲಿ ನಾಗಶೇಖರ್ ಮೇಲೆ ಕೇಸ್ ಹಾಕಿ ಈ ಚಿತ್ರವನ್ನು ಬಿಡುಗಡೆ ಮಾಡದಂತೆ ಸ್ಟೇ ತಂದಿದ್ದರು.
Simhada Haadi: ಇದೇ ಡಿಸೆಂಬರ್ 30 ಕನ್ನಡ ಚಿತ್ರರಂಗದ ʼಸಾಹಸ ಸಿಂಹʼ ಖ್ಯಾತಿಯ ನಟ ವಿಷ್ಣುವರ್ಧನ್ ಅಭಿಮಾನಿಗಳನ್ನು ಅಗಲಿದ ದಿನ. 2009ರ ಡಿಸೆಂಬರ್ 30ರ ಮುಂಜಾನೆ ಬಂದ ಸುದ್ದಿ, ಇಡೀ ಕನ್ನಡ ಚಿತ್ರರಂಗಕ್ಕೆ ಅರಗಿಸಿಕೊಳ್ಳಲಾಗದಂತಹ ನೋವನ್ನು ನೀಡಿತು. ಇದೀಗ 2024 ಡಿಸೆಂಬರ್ 30ಕ್ಕೆ ವಿಷ್ಣುವರ್ಧನ್ ಇಲ್ಲದೇ 15 ವರ್ಷ ಸಂದಿದೆ.
Raavutha: ಶ್ರೀ ವಿಶ್ವಕರ್ಮ ಸಿನಿಮಾಸ್ ನಿರ್ಮಾಣದ ರಾವುತ ಚಿತ್ರವು ಒಂದು ವಿಭಿನ್ನ ಪ್ರಯತ್ನದ ಸಿನಿಮಾ, ಗಂಡುಗಲಿ ಕುಮಾರರಾಮ ಕಾಲದ ಸಾಮಾನ್ಯ ಜನರ ಮತ್ತು ಸಾಧಕರ ಕಥೆ. ಆದರೆ ಸಿನಿಮಾ ಎಂದರೆ ಸಾಹಸ, ಪ್ರೀತಿ, ದ್ವೇಷ, ಅಂಥ ಹಲವು ಮಜಲು ಇಟ್ಟುಕೊಂಡು ಬರುತ್ತೇವೆ.
Kuchuku Kannada Movie: ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ "ಕುಚುಕು" ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಎಂ.ಎನ್ ಕುಮಾರ್, ನಿರ್ಮಾಪಕ ಎಂ.ಡಿ.ಪಾರ್ಥಸಾರಥಿ, ನೃತ್ಯ ನಿರ್ದೇಶಕ ಜಗ್ಗು ಮಾಸ್ಟರ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಚಿತ್ರದಲ್ಲಿ ಖಳನಾಯಕನಾಗಿ ನಟಿಸಿರುವ ಶಿವಾಜಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
Gangs Of UK: ಡೆಡ್ಲಿ ಸೋಮ, ಮಾದೇಶ ಖ್ಯಾತಿಯ ರವಿ ಶ್ರೀವತ್ಸ ಅವರ ನಿರ್ಮಾಣ ಹಾಗೂ ನಿರ್ದೇಶನದ ನೂತನ ಚಿತ್ರ 'ಗ್ಯಾಂಗ್ಸ್ ಆಫ್ ಯುಕೆ' 2025ರ ಯುಗಾದಿ ಹಬ್ಬದ ವೇಳೆಗೆ ರಾಜ್ಯಾದ್ಯಂತ ತೆರೆ ಕಾಣಲಿದೆ.
Opera Song: "ಜಾಲಿಡೇಸ್" ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ "31 DAYS" ಚಿತ್ರಕ್ಕಾಗಿ ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿ, ನಿರಂಜನ್ ಶೆಟ್ಟಿ ಅವರೊಂದಿಗೆ ನಟಿಸಿರುವ ಒಪೇರ ಶೈಲಿಯ ಗೀತೆ ಡಿಸೆಂಬರ್ 31 ನೇ ತಾರೀಖು ಬಿಡುಗಡೆಯಾಯಿತು. ಇದು ವಿ.ಮನೋಹರ್ ಅವರು ಸಂಗೀತ ಸಂಯೋಜಿಸಿರುವ 150ನೇ ಚಿತ್ರ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
Rage of rudra: ತೆಲುಗು ನಿರ್ಮಾಪಕ ಟಿಜಿ ವಿಶ್ವ ಪ್ರಸಾದ್ ನೇತೃತ್ವದ ಪೀಪಲ್ ಮೀಡಿಯಾ ಫ್ಯಾಕ್ಟರಿ ಇದೀಗ ಸ್ಯಾಂಡಲ್ವುಡ್ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರ ಸಿನಿಮಾ ನಿರ್ಮಾಣ ಮಾಡುತ್ತಿದೆ. ಇದೀಗ ಈ #PMF49ನೇ ಪ್ರಾಜೆಕ್ಟ್ನ "ರೇಜ್ ಆಫ್ ರುದ್ರ" ಪೋಸ್ಟರ್ ಅನಾವರಣಗೊಂಡಿದೆ. ತೆಲುಗಿನಲ್ಲಿ ಈಗಾಗಲೇ ಬ್ಲಾಕ್ಬಸ್ಟರ್ ಹಿಟ್ಗಳನ್ನು ನೀಡಿರುವ ಈ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆ, ಈಗ ಈ ಬಹು ನಿರೀಕ್ಷಿತ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯಲು ಸಜ್ಜಾಗಿದೆ.
Kiccha Sudeep Mother Love: ಇತ್ತೀಚೆಗೆ ಸ್ಯಾಂಡಲ್ವುಡ್ನ ಬಾದ್ ಷಾ ಕಿಚ್ಚ ಸುದೀಪ್ ಅವರು ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ. ಪ್ರೀತಿಯ ಅಮ್ಮನ ಅಗಲಿಕೆಯನ್ನು ಕಿಚ್ಚನಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.
Swaccha: ಎರಡು ಕಥೆಗಳನ್ನು ಪ್ಯಾರಲಲ್ ಆಗಿ ಹೇಳಲು ಪ್ರಯತ್ನಿಸಿರುವ ನಿರ್ದೇಶಕ ಸುರೇಶ್ ರಾಜು ಅವರು ಆ ಕಥೆಗಳಲ್ಲಿ ಬರೋ ಐದು ಪಾತ್ರಗಳು, ಅವರವರ ಸ್ವೇಚ್ಚೆಗೋಸ್ಕರ ಯಾವ ರೀತಿ ಹೋರಾಟ ನಡೆಸುತ್ತವೆ ಎಂಬುದನ್ನು 'ಸ್ವೇಚ್ಛಾ' ಚಿತ್ರದ ಮೂಲಕ ಹೇಳಲು ಪ್ರಯತ್ನಿಸಿದ್ದಾರೆ. ಸ್ಟಾರ್ ಮಸ್ತ್ ವಿಕ್ಟರಿ ಆರ್ಟ್ಸ್ ಬ್ಯಾನರ್ ಅಡಿ ಸ್ಟಾರ್ ಮಸ್ತಾನ್ ಹಾಗೂ ಕೆ.ಆರ್. ಮುರಹರಿ ರೆಡ್ಡಿ ಅವರ ನಿರ್ಮಾಣದ ಸ್ವೇಚ್ಛಾ ಚಿತ್ರದ ಟ್ರೈಲರ್ ಬಿಡುಗಡೆ ಹಾಗೂ ಎರಡು ಹಾಡುಗಳ ಪ್ರದರ್ಶನ ಇತ್ತೀಚೆಗೆ ನೆರವೇರಿತು, ಅನ್ವಿಶ್ ಹಾಗೂ ಪವಿತ್ರಾ ನಾಯಕ್ ಚಿತ್ರದ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
Sri Murali: ಬಘೀರ ಸಿನಿಮಾ ಮೂಲಕ, ಹಿಟ್ ಪಡೆದ ನಟ, ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಮುಂದಿನ ಸಿನಿಮಾ ಯಾವುದು? ಸದ್ಯಕ್ಕೆ ಈ ಪ್ರಶ್ನೆಗೆ ಇಲ್ಲಿಯವರೆಗೂ ಉತ್ತರ ಸಿಕ್ಕಿರಲಿಲ್ಲ. ಇದೀಗ ಇಂದು ಶ್ರೀಮುರಳಿ ಬರ್ತಡೇ ಪ್ರಯುಕ್ತ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದೆ.
45 ಸಿನಿಮಾ ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಹಾಲಿವುಡ್ ನ 150 ಕ್ಕೂ ಅಧಿಕ ಚಿತ್ರಗಳಿಗೆ ಗ್ರಾಫಿಕ್ಸ್ ಕೆಲಸ ಮಾಡಿ, ಆಸ್ಕರ್ಗೆ ನಾಮಿನೇಟ್ ಆಗಿದ್ದ ಟೊರೊಂಟೊದ "MARZ" ವಿಎಫ್ಎಕ್ಸ್ ಕಂಪನಿ ಗ್ರಾಫಿಕ್ಸ್ ಕೆಲಸ ಮಾಡುತ್ತಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ಉಪ್ಪಿ 2 ಚಿತ್ರದ ನಿರ್ದೇಶನದ ನಂತರ ಈಗ ಉಪೇಂದ್ರ ಮತ್ತೆ ನಿರ್ದೇಶನಕ ಹ್ಯಾಟ್ ಧರಿಸಿದ್ದಾರೆ.ಹೌದು, ಭಯಾನಕ ಭವಿಷ್ಯ ಸೂಚಿಯನ್ನು ಪ್ರತಿಬಿಂಬಿಸುವ ಯು ಅಂಡ್ ಐ ಚಿತ್ರದ ಮೂಲಕ ಈಗ ನಟನೆ ಜೊತೆಗೆ ನಿರ್ದೇಶಕ್ಕೆ ಇಳಿದಿರುವ ಅವರು. ಇತ್ತೀಚಿಗೆ ಚಿತ್ರದ ಟ್ರೈಲರ್ ಗೆ ವಾರ್ನರ್ ಎಂದು ಕರೆದಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಅದರದೆ ಆದ ಇತಿಹಾಸವಿದೆ. ಡಾ||ರಾಜಕುಮಾರ್ ಅವರಂತಹ ಕಲಾವಿದರು ಸಾಕಷ್ಟು ಸಮಾಜಮುಖಿ ಚಿತ್ರಗಳಲ್ಲಿ ನಟಿಸಿ ಮಾದರಿಯಾಗಿದ್ದಾರೆ. ಪ್ರವೀಣ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.
Actress Rashmi: ಸ್ಯಾಂಡಲ್ವುಡ್ನಲ್ಲಿ ಮಿಂಚಿ ಮರೆಯಾದ ಅದೆಷ್ಟೋ ತಾರೆಗಳಿದ್ದಾರೆ, ಅದರಲ್ಲಿ ದುನಿಯಾ ಸಿನಿಮಾದ ರಶ್ಮಿ ಕೂಡ ಒಬ್ರು. ರಶ್ಮಿ ಎನ್ನುವ ಹೆಸರು ಕೇಳಿದ ಒಡನೆ ಅಷ್ಟು ಬೇಗ ಮುಖಭಾವ ನೆನಪಾಗುವುದಿಲ್ಲ, ಆದರೆ ದುನಿಯಾ ಸಿನಿಮಾ ನಟಿ ಎಂದ ಒಡನೆ ತಟ್ಟನೆ ಈಕೆ ನೆನಪಾಗ್ತಾರೆ. ಅದ್ಭುತ ಅಭಿನಯ, ಮುಗ್ಧ ಮಾತು ಹಾಗೂ ಸಿನಿಮಾದಲ್ಲಿ ಆಕೆ ನಿಭಾಯಿಸಿದಂತಹ ಮನಕಲುಕುವ ಪಾತ್ರ ಇಂದಿಗೂ ನಮ್ಮ ಕಣ್ಣ ಮುಂದೆ ಒಮ್ಮೆ ಬಂದು ಹೋಗುತ್ತದೆ.
Naa Ninna Bidalaare: ನಾ ನಿನ್ನ ಬಿಡಲಾರೆ ... ಕನ್ನಡ ಚಿತ್ರರಂಗದ ಇತಿಹಾಸ ಪುಟಗಳಲ್ಲಿ ದಾಖಲಾಗಿರೋ ಪವರ್ ಹಿಟ್ ಸಿನಿಮಾ. ಇದೀಗ ಅದೇ ಹೆಸರಲ್ಲಿ, ಹೊಸ ರೀತಿಯ ಕಥಾವಸ್ತು ಹೊಂದಿರೋ ,ಹೊಸ ತಂಡದ ಹೊಸ ಬಗೆಯ ಸಿನಿಮಾ ಈ ವಾರ ತೆರೆಗೆ ಬರ್ತಿದೆ.
Chaya Singh Age: ನಟಿ ಛಾಯಾ ಸಿಂಗ್ ಈ ಹೆಸರು ಬಣ್ಣದ ಲೋಕಕ್ಕೆ ಚಿರ ಪರಿಚಿತ. ಸಧ್ಯ ಅಮೃತಧಾರೆ ಧಾರಾವಾಹಿಯಲ್ಲಿ ಛಾಯಾ ಸಿಂಗ್ ಭೂಮಿಕಾ ಪಾತ್ರದಲ್ಲಿ ಮಿಂಚುತ್ತಿದ್ದಾರೆ, ಒಬ್ಬ ಗಟ್ಟಿಗಿತ್ತಿ ಮಹಿಳಾ ಪಾತ್ರದಲ್ಲಿ ನೋಡುಗರಿಗೆ ಸ್ಫೂರ್ತಿಯಾಗಿ ನಟಿಯ ಪಾತ್ರ ಎಲ್ಲರನ್ನೂ ರಂಜಿಸುತ್ತಿದೆ, ಭೂಮಿಕಾ ಅವರ ಸಿಂಪಲ್ ಲುಕ್ ಅಂತೂ ಎಲ್ಲರಿಗೂ ಇಷ್ಟವಾಗುತ್ತಿದೆ. ಆದ್ರೆ ಭೂಮಿಕಾ ಅಲಿಯಾಸ್ ಛಾಯಾ ಸಿಂಗ್ ಅವರ ನಿಜವಾದ ವಯಸ್ಸೆಷ್ಟು ಎಂಬುದನ್ನು ನೀವು ಗೆಸ್ ಮಾಡಿದ್ದಿರಾ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.