BPL, Antyodaya Anna Yojana: ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿರುವವರ ಪಡಿತರ ಚೀಟಿಯನ್ನು ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿರುವ ಸರ್ಕಾರ, ಇದೀಗ ಬಿಪಿಎಲ್, ಅಂತ್ಯೋದಯ ಕಾರ್ಡ್'ದಾರರಿಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರ ಕೈಗೊಳ್ಳಲು ಸಜ್ಜಾಗಿದೆ.
ಕಾಂಗ್ರೆಸ್ನ ಹೈಕಮಾಂಡ್ ನೀಡುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿ ಕೆಲಸ ಮಾಡುತ್ತೇವೆ. ಆದರೆ ಇಲ್ಲಿ ನಡೆದಿರುವ ರಾಜೀನಾಮೆಯ ಪ್ರಹಸನ ನನಗೆ ಆಶ್ಚರ್ಯ ಉಂಟುಮಾಡಿದೆ ಎಂದು ಮುನಿಯಪ್ಪ ಹೇಳಿದ್ದಾರೆ.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಆಧುನಿಕ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ದೇವನಹಳ್ಳಿ ತಾಲ್ಲೂಕು ಪಂಚಾಯಿತಿಯಡಿ ದೇವನಹಳ್ಳಿ ತಾಲ್ಲೂಕು ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸಮಗ್ರ ಅಭಿವೃದ್ಧಿ ಯೋಜನೆಯಡಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು.
ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಲ್ಲಿ ವಿತರಿಸುವ ಪಡಿತರ ಅಕ್ರಮ ತಡೆಗೆ ಸಂಪೂರ್ಣ ಪ್ರಯತ್ನ ಮಾಡಲಾಗುತ್ತಿದೆ ಎಂದು ಆಹಾರ ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಇಂದು ವಿಧಾನ ಪರಿಷತ್ನಲ್ಲಿ ತಿಳಿಸಿದರು.
ಇಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾದ ಕೆಹೆಚ್ ಮುನಿಯಪ್ಪನವರು ಇಲಾಖೆಯ ಲ್ಲಿನ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿದರು.
ಎಂ ಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ .ಮಾತು ಕೊಟ್ಟಂತೆ ಜುಲೈ ೧ರಿಂದ ಯೋಜನೆ ಜಾರಿ ಆಗುತ್ತೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದರು.
ಹಣ ನೀಡುವ ಬಗ್ಗೆ ವಿವರಿಸಿದ ಸಚಿವ ಮುನಿಯಪ್ಪ, ಈ ಯೋಜನೆ ಅನುಷ್ಠಾನ ಮಾಡಲು (ಪರ್ಯಾಯವಾಗಿ ಹಣ ನೀಡಲು) ಸುಮಾರು ₹700 ಕೋಟಿ ಆಗಲಿದೆ. ಇದು ಪರ್ಯಾಯ ವ್ಯವಸ್ಥೆ ಅಷ್ಟೇ, ಮುಂದೆ ಸರ್ಕಾರ ಟೆಂಡರ್ ಮೂಲಕ ಅಕ್ಕಿ ಪಡೆದು ಅನ್ನ ಭಾಗ್ಯ ಮೂಲಕ ಕಾಂಗ್ರೆಸ್ ಹೇಳಿದಂತೆ ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡಲಾಗುವುದು ಎಂದು ಸಂಪುಟ ತೀರ್ಮಾನ ಬಗ್ಗೆ ವಿವರಿಸಿದರು.
ಸರ್ಕಾರ ರಚನೆ ದಿನದಿಂದಲೇ ಬಣ ಬಡಿದಾಟ ಆರಂಭ. ಸಂಪುಟ ರಚನೆ ವಿಚಾರದಲ್ಲಿ ಸಿದ್ದು-ಡಿಕೆಶಿ ವೈಮನಸ್ಸು. ಇಬ್ಬರೂ ನಾಯಕರ ವೈಮನಸ್ಸು ಮತ್ತೆ ಮುಂದುವರಿಕೆ. ದೆಹಲಿಯಿಂದ ಬೇರೆ ಬೇರೆ ವಿಮಾನದಲ್ಲಿ ಬಂದ ನಾಯಕರು. ಸತತ 5 ಗಂಟೆಗಳ ಕಾಲ ಸಂಪುಟ ಸರ್ಕಸ್ ನಡೆಸಿದ್ದ ನಾಯಕರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.