ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಹೊಸ ಸಾಂಪ್ರದಾಯಿಕ ಚಾಲನೆ
ಮೊದಲನೇ ಬಾರಿಗೆ ಎಸ್ಪಿ ರೋಡ್ ಉತ್ಸವ ನಡೆಸಲು ತಯಾರಿ
ಇಂದಿನಿಂದ ಮೂರು ದಿನಗಳ ಕಾಲ ಅದ್ದೂರಿ ಎಸ್ಪಿ ರೋಡ್ ಉತ್ಸವ
ಇಂದು ಸಂಜೆ 6:00ಗೆ ಧರ್ಮರಾಯ ದೇವಸ್ಥಾನದಲ್ಲಿ ವಿಶೇಷ ಪೂಜೆ
ಅನ್ನದಾಸೋಹ, ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮ ಆಯೋಜನೆ
ಬೆಂಗಳೂರಿನಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ
ಬೆಳಗ್ಗೆಯಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆ
ಕೆಆರ್ ಮಾರ್ಕೆಟ್ನಲ್ಲಿ ಖರೀದಿ ಭರಾಟೆ ಬಲು ಜೋರು
ಹಬ್ಬದ ಸಾಮಾಗ್ರಿಗಳ ಖರೀದಿಗೆ ಮುಗಿಬಿದ್ದ ಜನ
ಮಾರ್ಕೆಟ್ ರಷ್.. ಹಣ್ಣು, ಹೂ ಬಲು ದುಬಾರಿ
ನಾಡಿನೆಲ್ಲೆಡೆ ದಸರಾ ಮಹೋತ್ಸವದ ಸಂಭ್ರಮ... ಆಯುಧ ಪೂಜೆ, ದೇವಸ್ಥಾನದಲ್ಲಿ ವಿಶೇಷ ಪೂಜೆ... ಟೆಂಪಲ್ ಮುಂಭಾಗ ಸಾಲುಗಟ್ಟಿ ವಾಹನ ನಿಲ್ಲಿಸಿ ಪೂಜೆ... ಇತ್ತ ಮಾರ್ಕೆಟ್ನಲ್ಲಿ ಹಬ್ಬದ ಖರೀದಿಗೆ ಜನ ಬ್ಯುಸಿ...
Varamahalaxmi: ನೋಡಿದ ಕಡೆಯೆಲ್ಲ ಜನಜಾತ್ರೆ. ಜನ ಮರುಳೊ ಜಾತ್ರೆ ಮರುಳೊ ಎಂಬಂತಹ ಪರಿಸ್ಥಿತಿ. ಇದು ಕೆ.ಆರ್.ಮಾರುಕಟ್ಟೆಯಲ್ಲಿ ಕಂಡು ಬಂದ ಇಂದಿನ ದೃಶ್ಯ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕೆ.ಆರ್.ಮಾರುಕಟ್ಟೆ ಇಂದು ಅಕ್ಷರಶಃ ಜನಜಾತ್ರೆಯಾಗಿ ಮಾರ್ಪಟ್ಟಿತ್ತು. ಹೂವು ಹಣ್ಣು ಖರೀದಿಗಾಗಿ ಜನ ಮುಗಿಬಿದ್ದಿದ್ರು.
ಗೌರಿ ಹಬ್ಬ ಹಿನ್ನೆಲೆ ಬೆಂಗಳೂರಿನ ಕೆ.ಆರ್.ಮಾರ್ಕೆಟ್ನಲ್ಲಿ ಜನಜಂಗುಳಿ ಇದೆ. ಹೂವು, ಹಣ್ಣು, ಪೂಜಾ ಸಾಮಗ್ರಿ, ಬಾಳೆದಿಂಡು, ತುಳಸಿ ತೋರಣ, ನಿಂಬೆಹಣ್ಣು, ಬೇವಿನ ಸೊಪ್ಪು, ಕಮಲ ಹೂವಿಗೆ ಜನ ಮುಗಿಬಿದ್ದಿದ್ದಾರೆ. ಮಾರ್ಕೆಟ್ ಮುಖ್ಯ ರಸ್ತೆಯ ಎರಡೂ ಬದಿ ವ್ಯಾಪಾರ ಜೋರಾಗಿದೆ.
ನಾಳೆ ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ ಸಡಗರದ ಸಂಭ್ರಮ ಮನೆ ಮಾಡಿದೆ. ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ ಕೆ.ಆರ್ ಮಾರ್ಕೆಟ್ ನಲ್ಲಿ ಹಬ್ಬದ ಖರೀದಿ ಬಲು ಜೋರಾಗಿತ್ತು. ಕೆ.ಆರ್ ಮಾರ್ಕೆಟ್ ಸುತ್ತಮುತ್ತ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಗರದ ಮಾರುಕಟ್ಟೆಗಳಲ್ಲಿ ವರಮಹಾಲಕ್ಷ್ಮೀ ಹಬ್ಬದ ವಸ್ತುಗಳನ್ನ ಕೊಳ್ಳಲು ಜನ ಜಂಗುಳಿಯೇ ನೆರೆದಿತ್ತು.
ಕೆ.ಆರ್. ಮಾರುಕಟ್ಟೆಗೆ ಲಕ್ಷಾಂತರ ಜನ ಬರುವುದರಿಂದ ಸದಾ ಗಿಜುಗುಡುತ್ತಿದೆ. ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನಗರದ ವಿವಿಧ ಭಾಗಗಳಲ್ಲಿ ಕೆ.ಆರ್. ಮಾರುಕಟ್ಟೆ ಮಾದರಿಯಲ್ಲೇ ಮಾರುಕಟ್ಟೆ ತೆರೆಯುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೌನ್ಸಿಲಿಂಗ್ ಮೂಲಕ ಒಪ್ಪಿಗೆ ಪಡೆದು, ಬಜೆಟ್ನಲ್ಲಿ ಅನುದಾನ ಮೀಸಲಿಡಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.