Lok Sabha Election 2024: ಗುರುವಾರ ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
Lok Sabha election 2024: ಬಿಜೆಪಿ ಅವರ ಬಳಿ ಇರುವ ಅಸ್ತ್ರ ಅದೊಂದೆ. ಅವರಿಗೆ ಸೋಲಿನ ಭೀತಿ ಕಾಡುತ್ತಿದ್ದು, ಐಟಿ, ಇಡಿ, ಸಿಬಿಐ ಬಿಟ್ಟು ಅವರಿಗೆ ಬೇರೆ ಗೊತ್ತಿಲ್ಲ. ಪ್ರಧಾನಮಂತ್ರಿಗಳಿಗೆ, ಬಿಜೆಪಿ ನಾಯಕರಿಗೆ ಬೆಲೆ ಏರಿಕೆ ಬಗ್ಗೆ ಮಾತನಾಡಲು ಹೇಳಿ. ಪ್ರಧಾನಮಂತ್ರಿಗಳು 10 ವರ್ಷಗಳ ಹಿಂದೆ ಹೇಳಿರುವ ಹೇಳಿಕೆ, ಕೊಟ್ಟಿರುವ ವಚನಗಳ ಬಗ್ಗೆ ಇಂದು ಅವರು ಏನು ಹೇಳುತ್ತಾರೆ ಕೇಳಿ. ಅವರಿಂದ ಶ್ರೀರಾಮನವಮಿ ದಿನ ಈ ವಿಚಾರವಾಗಿ ಸತ್ಯ ಹೇಳಿಸಿ” ಎಂದರು.
CM Siddaramaiah: ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ Bharatiya Janata Party (BJP) ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು.
ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆಯುವ ಚುನಾವಣೆಗೆ ಏಪ್ರಿಲ್ 12 ರಂದು ಚುನಾವಣಾ ಅಧಿಸೂಚನೆ ಹೊರಡಿಸಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ 144ರನ್ವಯ ಸಾರ್ವಜನಿಕರ ಅನಗತ್ಯ ಓಡಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಭರಾಟೆ ಆರಂಭವಾಗಿದೆ. ಏಳು ಹಂತಗಳ ಉಮೇದುವಾರಿಕೆಯಲ್ಲಿ ಹಲವು ಏರಿಳಿತ ಕಾಣುತ್ತಿದ್ದು ಮತಬೇಟೆ ಕೂಡ ಬಿರುಸಾಗಿ ಸಾಗಿದೆ. ಈ ಹಂತದಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಮತದಾರರ ಜಾಗೃತಿ ಕೂಡ ಜೀ ಕನ್ನಡ ನ್ಯೂಸ್ ನಡೆಸುತ್ತಿದ್ದು ಜೊತೆಗೆ ಕ್ಷೇತ್ರ ಪರಿಚಯ ಕೂಡ ಆರಂಭವಾಗಿದೆ. ಸಂಸತ್ ಕ್ಷೇತ್ರದಲ್ಲಿ ಕಾಡುತ್ತಿರುವ ಸಮಸ್ಯೆಗಳು, ಹಿಂದೆ ಗೆದ್ದಿರೋ ಪಕ್ಷ ಮತ್ತು ನಾಯಕರ ಸಾಧನೆ, ಜಾತಿವಾರು ಶಕ್ತಿ ಹೇಗೆ ಪ್ರಭಾವ ಬೀರಲಿದೆ..? ನಿರ್ಣಾಯಕ ಸಾಮಾಜಿಕ ಅಂಶ ಹಾಗೂ ಕ್ಷೇತ್ರದ ಭೌಗೋಳಿಕ ಹಿನ್ನೆಲೆ ಹೇಗಿದೆ..? ಅಭ್ಯರ್ಥಿಗಳ ಗೆಲುವಿಗೆ ಮತದಾರನ ಮೇಲೆ ಪ್ರಭಾವ ಬೀರುವ ಅಂಶಗಳನ್ನು ನಿಮ್ಮ ಮುಂದಿಡುವ ಕಾರ್ಯಕ್ರಮವೇ ಕ್ಷೇತ್ರ ಪರಿಚಯ
lok sabha election 2024: ದೇಶಾದ್ಯಂತ ಕಾಂಗ್ರೆಸ್ 40 ಕ್ಷೇತ್ರಗಳನ್ನು ಗೆಲ್ಲುವುದೂ ಕಷ್ಟವಿದೆ. ಹಾಗಿರುವಾಗ ಕರ್ನಾಟಕದಲ್ಲಿ ಹೇಗೆ 20 ಕ್ಷೇತ್ರಗಳನ್ನು ಗೆಲ್ಲುತ್ತದೆ? ಎಂದು ಪ್ರಶ್ನಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.