Kangana Ranaut: 2024 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ, ಬಾಲಿವುಡ್ ನಟಿ ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿ ಸಂಸದರಾಗಿದ್ದಾರೆ. ನಟಿ ಕಂಗನಾ ರಣಾವತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ಅವರು ತಮ್ಮ ಮೊದಲ ಹೇಳಿಕೆಯಲ್ಲಿ, "ಚುನಾವಣೆಯು ಒಮ್ಮತವನ್ನು ನಿರ್ಮಿಸುವ ಪ್ರಕ್ರಿಯೆಯಾಗಿದೆ. ಸಂಸತ್ತಿಗೆ ಎರಡು ಬದಿಗಳಿವೆ ಆದ್ದರಿಂದ ಯಾವುದೇ ಪ್ರಶ್ನೆಯ ಎರಡೂ ಅಂಶಗಳನ್ನು ಪ್ರಸ್ತುತಪಡಿಸಬಹುದು."ಎಂದು ಅವರು ಹೇಳಿದ್ದಾರೆ.
ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಇಲ್ಲಿನ ಸಮಸ್ಯೆಯನ್ನು ಸರಿಪಡಿಸಿದರೆ ಮುಂಬರುವ ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ.
Lok Sabha Election Result 2024: ನಾಲ್ವರು ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಐವರು ಈ ಹಿಂದಿನ ಲೋಕಸಭಾ ಚುನಾವಣೆಯ ದಾಖಲೆಯನ್ನು ಮೀರಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
Zee News AI Survey: ಆದರೆ ಈಗ ಜೀ ನ್ಯೂಸ್ ನ AI ಚುನಾವಣೋತ್ತರ ಸಮೀಕ್ಷೆ ಲೋಕಸಭಾ ಚುನಾವಣೆಯಲ್ಲಿ ಜನರ ನಾಡಿ ಮಿಡಿತವನ್ನು ಕಂಡುಕೊಳ್ಳುವುದರ ಮೂಲಕ ತನ್ನ ವಿಶ್ವಾಸಾರ್ಹತೆ ಹಾಗೂ ನಿಖರತೆಯನ್ನು ಸಾಬೀತುಪಡಿಸಿದೆ.ಕೃತಕ ಬುದ್ದಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ನಡೆಸಿದ ಸರ್ವೇ ಈಗ ಇಂದಿನ ಫಲಿತಾಂಶಕ್ಕೆ ಹತ್ತಿರ ಇರುವುದು ಸಾಬೀತಾಗಿದೆ.
Lok Sabha Election Result 2024: ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ರಾಜ್ಯ ಹಾಗೂ ದೇಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಂತಾಗಿದೆ. ದೇಶದಲ್ಲಿ ಭಾವನೆ ಸೋತಿದ್ದು, ಬದುಕು ಗೆದ್ದಿದೆ. ಬಿಜೆಪಿಯವರು 400 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಅದು ಸಾಧ್ಯವಾಗಿಲ್ಲ. ಅಯೋದ್ಯೆಯಲ್ಲೇ ಬಿಜೆಪಿ ಸೋತಿದೆ.
Lok Sabha Election Result 2024: ಚುನಾವಣೆಯ ಪ್ರಚಾರದುದ್ದಕ್ಕೂ ರಾಹುಲ್ ಗಾಂಧಿ ಜಾತಿ ಗಣತಿ ನಡೆಸುವುದಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು, ಅಷ್ಟೇ ಅಲ್ಲದೆ ಸ್ಥಳೀಯ ಸಮಸ್ಯೆಗಳನ್ನು ರಾಷ್ಟ್ರೀಯ ಸಮಸ್ಯೆಗಳ ಜೊತೆ ಸಂಯೋಜಿಸಿ ಜನರಿಗೆ ತಿಳಿಸುವಲ್ಲಿ ಯಶಸ್ವಿಯಾಗಿದ್ದರಿಂದಾಗಿ ಬಿಜೆಪಿ ಧರ್ಮಾಧಾರಿತ ರಾಜಕೀಯ ವಿಷಯಕ್ಕೆ ತಡೆಯೊಡ್ದುವಲ್ಲಿ ಯಶಸ್ವಿಯಾಯಿತು.
ಇಂದೋರ್ನ ಬಿಜೆಪಿ ಅಭ್ಯರ್ಥಿ ಶಂಕರ್ ಲಾಲ್ವಾನಿ 11,75,092 ಮತಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇಂದೋರ್ ಲೋಕಸಭಾ ಕ್ಷೇತ್ರದಲ್ಲೂ ನೋಟಾಗೆ ಗಮನಾರ್ಹ ಮತದಾನವಾಗಿದ್ದು, ದಾಖಲೆಯ 2.18 ಲಕ್ಷ ಮತದಾರರು ಅದನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ನಿಫ್ಟಿ 50 ಸೂಚ್ಯಂಕವು ಸುಮಾರು 700 ಪಾಯಿಂಟ್ಗಳನ್ನು ಕಳೆದುಕೊಂಡು 22,566 ರ ಇಂಟ್ರಾಡೇ ಕನಿಷ್ಠ ಮಟ್ಟವನ್ನು ತಲುಪಿತು, ಆದರೆ ಬಿಎಸ್ಇ ಸೆನ್ಸೆಕ್ಸ್ 2000 ಅಂಕಗಳನ್ನು ಕಳೆದುಕೊಂಡು 74,234 ರ ಇಂಟ್ರಾಡೇ ಕನಿಷ್ಠ ಪ್ರಮಾಣವನ್ನು ತಲುಪಿತು. ಇದೆ ವೇಳೆ, ಬ್ಯಾಂಕ್ ನಿಫ್ಟಿ ಸೂಚ್ಯಂಕವು 1500 ಅಂಕಗಳನ್ನು ಕಳೆದುಕೊಂಡಿತು ಮತ್ತು 49,409 ರ ಇಂಟ್ರಾಡೇ ಕನಿಷ್ಠವನ್ನು ಮುಟ್ಟಿತು.
Bangalore South Lok Sabha Election Results 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವು (ಕೆಂಗೇರಿ ಲೋಕಸಭಾ ಕ್ಷೇತ್ರ) ದಕ್ಷಿಣ ಭಾರತದ ಕರ್ನಾಟಕ ರಾಜ್ಯದ ೨೮ ಲೋಕಸಭೆ ಕ್ಷೇತ್ರಗಳಲ್ಲಿ ಒಂದಾಗಿದೆ.ಈ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ನಡೆದ ಮತದಾನವು ಯಶಸ್ವಿಯಾಗಿದೆ.ಈ ಕ್ಷೇತ್ರದಲ್ಲಿ ಶೇ ಶೇ 53.17 ರಷ್ಟು ಮತದಾನವಾಗಿದೆ.
Bangalore Central Lok Sabha Result 2024: 2008ರ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂದಿತು. ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕೆಲವು ಕ್ಷೇತ್ರಗಳನ್ನು ವಿಭಜಿಸಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಸೃಷ್ಟಿ ಆಯಿತು. 2009ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ HT ಸಾಂಗ್ಲಿಯಾನ ಸೋಲುಂಡರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.