Male Mahadeshwara Hills: ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಆಗಮಿಸುವ ಭಕ್ತಾದಿಗಳಿಗೆ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ 10 ಕಡೆ ಟ್ಯಾಂಕ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.
Illegal Liquor Sale: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿದಿದ್ದರೂ ಹಿರಿಯ ಅಧಿಕಾರಿಗಳಿಗೆ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆ ಗುಪ್ತ ಮಾಹಿತಿ ಸಂಗ್ರಹ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯಪೇದೆ ಅಣ್ಣಾದೊರೆ ರವರನ್ನು ಅಮಾನತ್ತು ಮಾಡಲಾಗಿದೆ.
Shivratri Jatre: ಶ್ರೀ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಬೇಡಗಂಪಣ ಅರ್ಚಕರು ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ತೇರನ್ನು ವಿವಿಧ ಬಗೆಯ ಪುಷ್ಪಗಳು , ತಳಿರು ತೋರಣ, ಬಣ್ಣದ ಬಟ್ಟೆಗಳಿಂದ ಸಿಂಗರಿಸಲಾಗಿತ್ತು.
ಎಣ್ಣೆ ಮಜ್ಜನ ಹಾಗೂ ಎಳ್ಳಿನ ಅಮಾವಾಸ್ಯೆ ಪೂಜೆ ಹಿನ್ನೆಲೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ಶೈಲಜಾ ಸೋಮಣ್ಣ ಮಹದೇಶ್ವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಕೊನೆಯ ಕಾರ್ತಿಕ ಸೋಮವಾರದ ಹಾಗೂ ಎಣ್ಣೆ ಮಜ್ಜನ ಪ್ರಯುಕ್ತ ದೇವಾಲಯದಲ್ಲಿ ಮುಂಜಾನೆಯಿಂದ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಬೆಳಗಲಾಯಿತು. ಕಾರ್ತಿಕ ಮಾಸದ ಕೊನೆಯ ದಿನವಾದ ಸೋಮವಾರ ಮಹಾ ಜ್ಯೋತಿ ದರ್ಶನ ರಾತ್ರಿ 9:30 ಇರಲಿದ್ದು ಲಕ್ಷಾಂತರ ಮಂದಿ ಭಕ್ತರು ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ 11 ರಿಂದ 15ರವರೆಗೆ ಮಹಾಲಯ ಅಮಾವಾಸ್ಯೆ ಜಾತ್ರೆ ನಡೆಯಲಿದ್ದು ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಸುಮಾರು 1.5 ರಿಂದ 2 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಆಗಮಿಸಿದ್ದಾರೆ.
ಅಮಾವಾಸ್ಯೆಗೆ ಈ ಪರಿ ಭಕ್ತರು ಆಗಮಿಸುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರಿಂದ ಪ್ರಾಧಿಕಾರದ ಸಿಬ್ಬಂದಿಗಳು ಹಾಗೂ ಪೊಲೀಸರು ಭಕ್ತರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.