ಸುರತ್ಕಲ್ನಲ್ಲಿ ನಡೆದ ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆಯವರೆಗೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 1ರ ಬೆಳಗ್ಗೆ 8 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ನಿನ್ನೆ ರಾತ್ರಿ ಬರ್ಬರವಾಗಿ ಹತ್ಯೆಯಾಗಿದ್ದ ಫಾಝಿಲ್ ಅಂತ್ಯ ಸಂಸ್ಕಾರ ಅವರ ಮನೆ ಸಮೀಪದ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ನೆರವೇರಿತು. ಸಾವಿರಾರು ಜನರ ಸಮ್ಮುಖದಲ್ಲಿ ಅಂತಿಮ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಇನ್ನು ಮಂಗಳೂರಿನ ಬಜ್ಪೆ, ಪಣಂಬೂರು, ಮುಲ್ಕಿ, ಸುರತ್ಕಲ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. “ಫಾಜಿಲ್ ಕೊಲೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ತನಿಖೆ ಬಳಿಕವೇ ಫಾಜಿಲ್ ಹತ್ಯೆಗೆ ಕಾರಣ ತಿಳಿದು ಬರಲಿದೆ” ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.