ಇಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಮ್ಮ ಕ್ಯಾಂಡಿಡೇಟ್ಸ್ ಸ್ವಾಮೀಜಿಗಳ ಬಳಿ ಹೋಗಿದ್ರು, ಇವತ್ತು ಅವರು ಹೋಗಿದ್ದಾರೆ ಎಂದರು.
Lok Sabha Election 2024: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ ನೀಡಿದರು.
DK Shivakumar : “ಅನೇಕ ಸಂಘಟನೆಗಳು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವುದು ಒಳ್ಳೆಯ ಕೆಲಸ. ಅವರಿಗೆ ಅಭಿನಂದನೆಗಳು. ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದಾಗ ಈ ಸಂಘಟನೆಗಳು ಎಲ್ಲಿಗೆ ಹೋಗಿದ್ದವು? ಇವು ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರಕಾರವನ್ನು ಯಾಕೆ ಆಗ್ರಹಿಸುತ್ತಿಲ್ಲ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. "ಕಾವೇರಿ ನದಿ ಮೇಲ್ವಿಚಾರಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ ಮೇಲ್ವಿಚಾರಣಾ ಸಮಿತಿ ಈಗಾಗಲೇ ಹಲವಾರು ಸಭೆ ನಡೆಸಿದ್ದು, ಜೂನ್ 16 ರಂದು ಅಂತಿಮ ಸಭೆ ನಡೆಯಲಿದೆ.
ಮೇಕೆದಾಟುನಲ್ಲಿ ಡ್ಯಾಮ್ ನಿರ್ಮಾಣ ಮಾಡುವುದನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಮಂಡಿಸಿದ್ದ ನಿರ್ಣಯಕ್ಕೆ ಈಗ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿ ವಿಧಾನಸಭೆಯಲ್ಲಿ ಇಂದು ಖಂಡನಾ ನಿರ್ಣಯ ಮಂಡಿಸಿದೆ.ಈಗ ರಾಜ್ಯ ಸರ್ಕಾರದ ನಿರ್ಣಯವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ತಮಿಳುನಾಡು ಮೇಕೆದಾಟು (Mekedatu)ಯೋಜನೆ ವಿಚಾರವಾಗಿ ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಇಂದು ಕಾನೂನು ಹಾಗೂ ತಾಂತ್ರಿಕ ಸಲಹೆ ಪಡೆದು ನಾಳೆ ಸದನದಲ್ಲಿ ನಿರ್ಣಯ ತರಲಾಗುವುದು ಎಂದು ತಿಳಿಸಿದರು.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬೇಕಿರುವುದು ರಾಜಕೀಯ ಇಚ್ಛಾಶಕ್ತಿ. ತಮಿಳುನಾಡು ಪರ ವಕೀಲರೆ 2018 ರಲ್ಲಿ ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸುವಾಗ ಮೆಟ್ಟೂರಿನ ಮೇಲ್ಭಾಗದಲ್ಲಿ ಕರ್ನಾಟಕವು ಮತ್ತೊಂದು ಅಣೆಕಟ್ಟೆ ಕಟ್ಟುವ ಬಗ್ಗೆ ಪರಿಗಣಿಸಬೇಕು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಮೇಕೆದಾಟು (Mekedatu) ಪಾದಯಾತ್ರೆಯಲ್ಲಿ ನಿಮ್ಮ ಫೋಟೋ ಇರಲಿಲ್ಲ ಎಂದು ಸಚಿವ ಆರ್.ಅಶೋಕ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. ನನಗೆ ಫೋಟೋ ಹಾಕಿಸಿಕೊಂಡು ಹೆಸರು ಹೇಳಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.
ಕರ್ನಾಟಕ-ತಮಿಳುನಾಡಿನವರೇ ಮಾಡಿಕೊಳ್ಳುವುದಾದರೆ ಇವರು ಯಾಕೆ ಬೇಕು. ಸುಪ್ರಿಂ ಕೋರ್ಟ್ (Supreme Court) ಕುಡಿಯುವ ನೀರಿಗೆ ಯಾವುದೇ ಎನ್ಓಸಿ ಬೇಕಾಗಿಲ್ಲ ಅಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Congress Padayatre: ಕಾಂಗ್ರೆಸ್ ನವರ ಈ ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ. ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆಯನ್ನು ಕೈಬಿಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
Mekedatu: ಮೇಕೆದಾಟು ಯೋಜನೆಯನ್ನು ಜಾರಿ ಮಾಡುವ ಗಂಡಸ್ತನ ಇರೋದು ಬಿಜೆಪಿಗೆ ಮಾತ್ರ. ಕಾಂಗ್ರೆಸ್ ಪಕ್ಷಕ್ಕೆ ಇದನ್ನೆಲ್ಲ ಅನುಷ್ಠಾನಗೊಳಿಸುವ ಶಕ್ತಿಯೇ ಇಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕರೋನಾ ನಿಯಮಾವಳಿಗಳನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR) ದಾಖಲಿಸಲಾಗಿದೆ. ಈಗ ಎಫ್ ಐ ಆರ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (A1) ಮೊದಲ ಆರೋಪಿಯನ್ನಾಗಿ ಮಾಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ (A2), ಸಂಸದ ಡಿ ಕೆ ಸುರೇಶ್ (A3) ಸೇರಿದಂತೆ 31 ನಾಯಕರ ವಿರುದ್ಧ ಎಫ್ಐಆರ್ (FIR)ದಾಖಲಿಸಲಾಗಿದೆ.
ಕಾಂಗ್ರೆಸ್ ಮೇಕೆದಾಟು (Congress Padayatre) ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ 30 ಮಂದಿ ವಿರುದ್ದ ಎಫ್ಐಆರ್ (FIR) ದಾಖಲು ಮಾಡಲಾಗಿದೆ ಎನ್ನಲಾಗಿದೆ.
Mekedatu Padayatre: ಏನ್ ಟೆಸ್ಟ್ ಮಾಡದು? ಏನನ್ನ ಟೆಸ್ಟ್ ಮಾಡದು? ಬೇಕಾದರೆ ಅವನು ಟೆಸ್ಟ್ ಮಾಡಿಸಿಕೊಳ್ಳಲಿ ಎಂದು ಏಕವಚನದಲ್ಲಿ ಮಾತನಾಡಿದರು. ನೀವು ನನ್ನ ಆರೋಗ್ಯ ಕಾಳಜಿಯ ಮೆರೆಗೆ ಬಂದ್ದಿದೀರ, ಆದರೆ ನಾನು ಯಾವುದೇ ಪರೀಕ್ಷೆ ಕೊಡಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.