ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆಯುವ ಚುನಾವಣೆಗೆ ಏಪ್ರಿಲ್ 12 ರಂದು ಚುನಾವಣಾ ಅಧಿಸೂಚನೆ ಹೊರಡಿಸಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ 144ರನ್ವಯ ಸಾರ್ವಜನಿಕರ ಅನಗತ್ಯ ಓಡಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
Chamarajanagar: ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha Constituency) ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರಿಗೆ ಅನಾಮದೇಯ ವ್ಯಕ್ತಿ ಕರೆ ಮಾಡಿ ಅಕ್ರಮ ಮದ್ಯ (Illegal Liquor) ಶೇಖರಣೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ಬಳಿಕ, ಶಿಲ್ಪಾನಾಗ್ ಅವರು ಅಬಕಾರಿ ಡಿಸಿ (Excise DC) ನಾಗಶಯನಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಮತ್ತು ವಿಷಯಗಳು ಅತ್ಯಧಿಕವಾಗಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇವುಗಳ ಮೂಲಕ ಕಾನೂನುಬಾಹಿರ ಮತ್ತು ಸುಳ್ಳು ಸುದ್ದಿಗಳು ಹರಡುವುದನ್ನು ನಿಯಂತ್ರಿಸಲು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಾಮಾಜಿಕ ಜಾಲತಾಣಗಳ ಉಸ್ತುವಾರಿ ಕೋಶವನ್ನು ಧಾರವಾಡ ಜಿಲ್ಲಾ ಚುನಾವಣಾ ನಿಯಂತ್ರಣ ಕೇಂದ್ರದಲ್ಲಿ ತೆರೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
BJP complaint against Yatindra Siddaramaiah: ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ, ಗುಜರಾತ್ನಲ್ಲಿ ಅವರ ಮೇಲೆ ಕೊಲೆ ಆರೋಪವಿದೆ. ಅವರನ್ನು ಗಡಿಪಾರು ಮಾಡಲಾಗಿದ್ದು, ಅಂತಹವರನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ರಾಜಕೀಯ ಮಾಡಿದ್ದಾರೆ ಅಂತಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು.
Lok Sabha Election 2024: ಜಪ್ತಿ ಮಾಡಿರುವ ಪೈಕಿ 22.28 ಕೋಟಿ ರೂ. ಮೌಲ್ಯದ ಮದ್ಯ, 52.42 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳು, 4.50 ಲಕ್ಷ ರೂ. ಮೌಲ್ಯದ ಚಿನ್ನ, 25.97 ಲಕ್ಷ ರೂ. ಮೌಲ್ಯದ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.
Lokasabha Election 2024:ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅವುಗಳು ಕಾರ್ಯಪ್ರವೃತ್ತವಾಗಿದೆ. 16 ಫ್ಲೈಯಿಂಗ್ ಸ್ಕ್ವಾಡ್, 24 ಎಸ್ಎಸ್ಟಿ ತಂಡ ಮತ್ತು 7 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ.
Lok Sabha Elections 2024: ಬಡತನ ಮತ್ತು ಭ್ರಷ್ಟಾಚಾರದ ವಿರುದ್ಧದ ಯುದ್ಧವು ಇನ್ನೂ ಹೆಚ್ಚಿನ ವೇಗದಲ್ಲಿ ಮುಂದುವರಿಯಲಿದೆ. ಭಾರತವನ್ನು ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲಿದ್ದೇವೆ. ಯುವಕರ ಕನಸುಗಳನ್ನು ನನಸು ಮಾಡುವ ನಮ್ಮ ಪ್ರಯತ್ನವನ್ನು ಮತ್ತಷ್ಟು ಗಟ್ಟಿಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
Lok Sabha Elections 2024: ದೇಶದ ಪ್ರತಿಯೊಂದು ರೈಲು ನಿಲ್ದಾಣ ಮತ್ತು ಏರ್ಪೋರ್ಟ್ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಸಹ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
Lok Sabha Elections 2024: ಚುನಾವಣೆಯ ವೇಳೆ ಹಿಂಸೆಗೆ ಯಾವುದೇ ರೀತಿ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ.
Lok Sabha Elections 2024: ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಡುವ ಫೇಕ್ ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲಾಗುವುದು. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಜನರಿಗೆ ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಯಾವುದೇ ರೀತಿ ಅವಕಾಶವಿಲ್ಲವೆಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
Lok Sabha Elections 2024: ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ.
Lok Sabha Elections 2024: ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರಾಜಕೀಯ ಪಕ್ಷಕ್ಕೆ ಲಾಭವಾಗುವಂತೆ ಸರ್ಕಾರದ ಹಣ ಬಳಸುವಂತಿಲ್ಲ. ಸರ್ಕಾರದ ಘೋಷಣೆಗಳು, ಉದ್ಘಾಟನೆಗಳು, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ ಸ್ಥಳವನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ.
Rajastan Assembly Elections: ರಾಜಸ್ಥಾನದಲ್ಲಿ ನವೆಂಬರ್ 25ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗಾಗಿ ಅಕ್ಟೋಬರ್ 09, 2023ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಲ್ಲಿನ ಚಾತ್ರಾಸಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಂವಿಧಾನದ ಮುನ್ನುಡಿಯನ್ನು ಓದಿದರು ಮತ್ತು ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ದೇಶದ ನಾಗರಿಕರ ಮೇಲಿದೆ ಎಂದು ಪ್ರತಿಪಾದಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.