ಮುಡಾ ಹಗರಣದ ಪ್ರಕರಣ ತನಿಖೆ ಚುರುಕು
ನಟೇಶ್ ವಶಕ್ಕೆ ಪಡೆದು ಕಚೇರಿಗೆ ಕರೆತಂದಿರೋ ಇಡಿ
ಶಾಂತಿನಗರದ ಇಡಿ ಕಚೇರಿಗೆ ಕರೆದು ವಶಕ್ಕೆ ಪಡೆದ ಇಡಿ
ಮುಡಾ ಆಯುಕ್ತರಿಗೆ ಅಧಿಕಾರಿಗಳ ಪ್ರಶ್ನೆಗಳ ಸುರಿಮಳೆ
ನಟೇಶ್ ಖಾಸಗಿ ವಾಹನದಲ್ಲೇ ಕರೆ ತಂದಿರೋ ಇಡಿ
ಚುನಾವಣಾ ಫಲಿತಾಂಶದ ಬೆನ್ನಲ್ಲೇ ದಿಢೀರ್ ಸುದ್ದಿಗೋಷ್ಠಿ ನಡೆಸಿದ ಕೆ.ಬಿ.ಕೋಳಿವಾಡ ಅವರು, ʼನಾನು ಈ ಬಗ್ಗೆ ಮೊದಲೇ ಎಚ್ಚರಿಕೆ ಕೊಟ್ಟಿದ್ದೆ, ಮುಡಾ ಹಗರಣವನ್ನು ಪ್ರಧಾನಿ ಮೋದಿಯವರು ಹರಿಯಾಣ ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳುತ್ತಾರೆ, ಇದು ಪಕ್ಷಕ್ಕೆ ಹಿನ್ನಡೆಯಾಗಬಹುದು ಎಂದು ಹೇಳಿದ್ದೆ. ಈಗ ನೋಡಿ ನಾನು ಹೇಳಿದಂತೆ ಆಗಿದೆʼ ಎಂದಿದ್ದಾರೆ.
MUDA Scam: ಮುಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮುಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಶಾಮೀಲಾಗಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ಮುಡಾ ಹೋರಾಟ ದೆಹಲಿ ಒಯ್ಯಲು ಬಿಜೆಪಿ ಚಿಂತನೆ
ಸೆಪ್ಟೆಂಬರ್ನಲ್ಲಿ ಬಿಜೆಪಿ ಸಂಸದರು, ಶಾಸಕರಿಂದ ಪ್ರತಿಭಟನೆ
ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಡ ಹೇರುವ ತಂತ್ರ
ಕೋರ್ಟ್ ನಡೆ ಗಮನಿಸಿ ಬಿಜೆಪಿ ಮುಂದಿನ ನಿರ್ಧಾರ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ
ಹಳೆಯ ಆಪ್ತ ಸ್ನೇಹಿತನ ಬೆನ್ನಿಗೆ ನಿಂತ ಸಿಎಂ ಇಬ್ರಾಹಿಂ
ರಾಜ್ಯದ ಮುಖ್ಯಮಂತ್ರಿಗೆ ಮೂರುವರೆ ಎಕರೆ ದೊಡ್ಡದೇನ್ರಿ..?
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರೆಂದು ರಾಜ್ಯಕ್ಕೆ ಗೊತ್ತು
ತುಮಕೂರಿನ ತಿಪಟೂರಿನಲ್ಲಿ ಮಾಜಿ ಸಚಿವ ಇಬ್ರಾಹಿಂ ಹೇಳಿಕೆ
ಕಲಬುರ್ಗಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ತಪ್ಪು ಮಾಡದಿದ್ದರೇ ಸಿಎಂ ಏಕೆ ಹೆದರಬೇಕು ಎನ್ನುವ ಜಗದೀಶ್ ಶೆಟ್ಟರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಯಾರು ಹೆದರಿದ್ದಾರೆ. ಶೆಟ್ಟರ್ ಅವರಿಗೆ ಹೆದರಿಕೆ ಇರಬೇಕು. ನಾವು ಈ ನೆಲದ ಕಾನೂನಿಗೆ ಗೌರವ ನೀಡುತ್ತೇವೆ. ಸಿಎಂ ಅವರ ತಪ್ಪು ಇಲ್ಲದಿರುವ ಕಾರಣಕ್ಕೆ ಹೈಕೋರ್ಟ್ ಪ್ರಾಸಿಕ್ಯೂಷನ್ ಗೆ ತಡೆ ನೀಡಿದೆ. ಈ ಹಿಂದೆ ರಚನೆ ಮಾಡಿರುವ ಆಯೋಗದಂತೆ ನ್ಯಾಯಾಂಗ ತನಿಖೆ ನಡೆಯಲಿದೆ” ಎಂದು ತಿಳಿಸಿದರು.
ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನನ್ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಕಿಡಿಕಾರಿದ್ದಾರೆ.
ಮುಡಾ ಹಗರಣ ಖಂಡಿಸಿ ಬಿಜೆಪಿ ನಾಯಕರು ಪಾದಯಾತ್ರೆ ವಿಚಾರ
ಪಾದಯಾತ್ರೆಯಿಂದ ಸಿಎಂ ಹಗರಣ ಹೊರಗೆ ತೆಗೆಯಲು ಹೊರಟಿಲ್ಲ
ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ
ಅಥಣಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಜೀ ಕನ್ನಡಕ್ಕೆ ಬಾಂಬ್
ಸಿಎಂ ಸಿದ್ದರಾಮಯ್ಯರ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಿರುವುದು ಅಕ್ರಮ ಎಂಬುದು ಪ್ರತಿಪಕ್ಷದವರ ಆರೋಪ. ಆದರೆ 50:50 ಅನುಪಾತದಲ್ಲಿ ಹಂಚಿಕೆ ಮಾಡುವ ನಿರ್ಧಾರ ಕೈಗೊಂಡಿದ್ದು ಯಾರು? ಬಿಜೆಪಿ ಸರ್ಕಾರವಲ್ಲವೇ"? ಎಂದು ಕೆಜೆ ಜಾರ್ಜ್ ಪ್ರಶ್ನಿಸಿದರು.
ಸಂಸತ್ ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಮತ್ತು ವಾಲ್ಮೀಕಿ ಹಗರಣಗಳು ಕಾಂಗ್ರೆಸ್ಸಿನ ಭ್ರಷ್ಟ ವ್ಯವಸ್ಥೆ ಮತ್ತು ಕಾರ್ಯವೈಖರಿಯನ್ನು ಬಹಿರಂಗಪಡಿಸುತ್ತವೆ ಎಂದು ಹೇಳಿದರು.
ಹಾಸನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆವತ್ತು ನಾನಾಗಲಿ ಅಥವಾ ದೇವೇಗೌಡರಾಗಲಿ ಕಾಂಗ್ರೆಸ್ʼನವರ ಮನೆ ಬಾಗಲಿಗೆ ಬಂದಿದ್ದವಾ? ದೇವೇಗೌಡರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಿದ್ದು ಕಮ್ಯುನಿಸ್ಟ್ ಪಕ್ಷಗಳು ಹಾಗೂ ಸಂಯುಕ್ತ ರಂಗದ ಅಂಗಪಕ್ಷಗಳು. ಒಬ್ಬ ಕನ್ನಡಿಗನನ್ನು ಪ್ರಧಾನಿ ಸ್ಥಾನದಿಂದ ತೆಗೆದವರು ಯಾರು? ನಾನು ಏನು ತಪ್ಪು ಮಾಡಿದ್ದೆ ಎಂದು ನನ್ನ ಸರಕಾರ ತೆಗೆದರು? ಇದರ ಬಗ್ಗೆಯೂ ಉಪ ಮುಖ್ಯಮಂತ್ರಿ ಹೇಳಬೇಕಲ್ಲವೇ ಎಂದು ಚಾಟಿ ಬೀಸಿದರು.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.