ʻಕೈʼ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆ ವಿಚಾರ. ತಡ ಯಾಕೆ, ತಕ್ಷಣವೇ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲಿ. ಇವರು ಆಪರೇಷನ್ ಲೋಟಸ್ ಎಕ್ಸ್ಪರ್ಟ್ ಎಂದು ಸದಾಶಿವನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದಕ್ಷಿಣ ಭಾರತದ ರಾಜ್ಯವಾದ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರವನ್ನು ಆಕ್ರಮಿಸಲು ಬಯಸಿದೆ. ಈ ಬಗ್ಗೆ ತೆಲಂಗಾಣ ಬಿಜೆಪಿ ನಾಯಕರೊಬ್ಬರು ದೊಡ್ಡ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಟಿಆರ್ಎಸ್ನ 15 ರಿಂದ 18 ಶಾಸಕರು ಮತ್ತು ಕಾಂಗ್ರೆಸ್ನ 5 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಜಸ್ಥಾನದಲ್ಲಿ "ಆಪರೇಷನ್ ಕಮಲದ" ನ ವೈಫಲ್ಯವು ರಾಜಕೀಯ ವಿಕೃತತೆಯ ಸೋಲು ಎಂದು ಶಿವಸೇನೆ ಹೇಳಿದೆ. ಕಾಂಗ್ರೆಸ್ ನಾಯಕರಾದ ಸಚಿನ್ ಪೈಲಟ್ ಮತ್ತು ರಾಹುಲ್ ಗಾಂಧಿ ನಡುವಿನ ಸಭೆಯು ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಸೌಹಾರ್ದಯುತ ನಿರ್ಣಯವನ್ನು ಸೂಚಿಸುತ್ತದೆ.
ಸುಮಾರು 4 ರಿಂದ 5 ಗಂಟೆಗಳ ಕಾಲ ಭೋಪಾಲ್ನಲ್ಲಿ ನಡೆದ ಸಭೆಯ ನಂತರ ಸಚಿವ ಜೀತು ಪಟ್ವಾರಿ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಗುರಿಯಾಗಿಸಿಕೊಂಡು ಅವರನ್ನು ಪ್ರಜಾಪ್ರಭುತ್ವದ ಕೊಲೆಗಾರ ಎಂದು ಕರೆದರು.
ಮಧ್ಯಪ್ರದೇಶವನ್ನು ಕರ್ನಾಟಕವೆಂದು ಪರಿಗಣಿಸುವ ತಪ್ಪನ್ನು ಬಿಜೆಪಿ ಮಾಡುತ್ತಿದೆ. ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಪ್ರಾಮಾಣಿಕರು ಎಂಬುದು ಅವರಿಗೆ ತಿಳಿದಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಿಜೆಪಿ ಸಭೆಯಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಈ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ ಇದನ್ನು ರಾಷ್ಟ್ರಪತಿಯವರ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.ಈ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷದ ನಾಯಕ ಕಿಡಿ ಕಾರಿದ್ದಾರೆ.
ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಾನು ಹೇಳಿದ್ದೇನೆ ಎಂದು ಹೇಳಿರುವುದು ಅಪ್ಪಟ ಸುಳ್ಳು, ನಾನು ಹಾಗೆ ಒತ್ತಾಯಿಸಿರುವುದನ್ನು ಅವರು ಸಾಬೀತು ಪಡಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ. ಆದರೆ, ಈ ಹಿಂದೆ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾದ ಆಪರೇಶನ್ ಕಮಲದ ಬಗ್ಗೆಯೂ ತನಿಖೆ ನಡೆಯಲಿ ಎಂದು ಖರ್ಗೆ ಆಗ್ರಹಿಸಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಪಿ. ವಿ. ಮೋಹನ್ ಅವರು ಬಿಜೆಪಿ ವಿರುದ್ದ ಕಿಡಿ ಕಾರುತ್ತಾ" ರಫೆಲ್ ವ್ಯವಹಾರದಲ್ಲಿ ಮಾಡಿದ ಹಣವನ್ನು ಕಾಂಗ್ರೆಸ್ ಶಾಸಕರನ್ನು ಕರ್ನಾಟಕದಲ್ಲಿ 'ಆಪರೇಷನ್ ಕಮಲದ' ಮೂಲಕ ಸೆಳೆಯಲು ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.