ಕಾರ್ಯಕ್ರಮದಲ್ಲಿ ಭಾಗವಹಿಸಲು ಲಕ್ಷಾಂತರ ರೈತರು ವಿವಿಧ ರಾಜ್ಯಗಳಿಂದ ದೆಹಲಿಗೆ ಪ್ರಯಾಣಿಸಿದ್ದಾರೆ ಎಂದು ಎಸ್ಕೆಎಂ ಹೇಳಿಕೊಂಡಿದೆ. ದೆಹಲಿ ಪೊಲೀಸರು 'ಕಿಸಾನ್ ಮಹಾಪಂಚಾಯತ್'ಗೆ ಭಾರಿ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ.
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಮುಸ್ಲಿಂ ಯುವಕ ಆಜಾನ್ ಕೂಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಆಜಾನ್ ಹಾಗು ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಅವಹೇಳನ ಆರೋಪ ಹಿನ್ನೆಲೆ, ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿ ವಿರೋಧ ವ್ಯಕ್ತಪಡಿಸಿದ್ದಾರೆ.
Health Department : ಹೆಚ್ಚಿನ ಒಳಗುತ್ತಿಗೆ ನೌಕರರು ಕಳೆದ 15-20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಅವರನ್ನು ಖಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ.ಆದರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರ ವಿರುದ್ದ ಹಲವಡೆ ಪ್ರತಿಭಟನೆ ನಡೆಸಲಾಗುತ್ತಿದೆ.
ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ಶಾಸಕರಿಗೆ ನೀಡಿದ್ದ ಅನುದಾನ ಬಿಡುಗಡೆಗೆ ತಡೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಅಹೋರಾತ್ರಿ ಏಕಾಂಗಿ ಧರಣಿ ನಡೆಸಿದ್ದಾರೆ. ಸ್ಥಳಕ್ಕೆ ಡಿಕೆಶಿ ಭೇಟಿ ನೀಡಿದ್ದು, ಡಿಕೆಶಿ ಮನವಿ ಮೇರೆಗೆ ಪ್ರತಿಭಟನೆ ಕೈಬಿಟ್ಟಿದ್ದಾರೆ..
ರಾಯಚೂರಿನಲ್ಲಿ ನೀರಿಗಾಗಿ ಅನ್ನದಾತರು ಬೀದಿಗಿಳಿದಿದ್ದಾರೆ.. ರಾಯಚೂರು ಕೆಳಭಾಗದ ರೈತರು ನೀರಿಗಾಗಿ ಹರಸಾಹಸ ಪಡುತ್ತಿದ್ದಾರೆ.. ಒಂದು ತಿಂಗಳಿನಿಂದ ನೀರಿಲ್ಲದೇ ರೈತರ ಬೆಳೆ ಹಾಳಾಗುತ್ತಿದೆ. ಸರಿಯಾಗಿ ನೀರು ಕೊಡಿದ್ರೆ ಪ್ರತಿಭಟನೆ ನಡೆಸೋದಾಗಿ ಮಾನ್ವಿ ಸಿರವಾರ ತಾ. ರೈತರು ಎಚ್ಚರಿಕೆ ನೀಡಿದ್ದಾರೆ..
ರಾಜ್ಯ ಸರಕಾರಿ ನೌಕರರ ಸಂಘದ ಮುಷ್ಕರ ಬಿಸಿ ವಿಜಯಪುರಕ್ಕೆ ತಟ್ಟಿದೆ. ವಿಜಯಪುರ ಮಹಾನಗರ ಪಾಲಿಕೆಗೆ ಬೀಗ ಹಾಕಿದ ಸಂಘದ ಜಿಲ್ಲಾ ಘಟಕ, ಪ್ರತಿಭಟನೆ ನಡೆಸಿದೆ. ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ ನೇತೃತ್ವದಲ್ಲಿ ಬೀಗ ಹಾಕಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ಮುಷ್ಕರಕ್ಕೆ ಪಾಲಿಕೆ ಸಫಾಯಿ ಕರ್ಮಚಾರಿಗಳು ಸಾಥ್ ನೀಡಿದರು.
ಸರ್ಕಾರಿ ನೌಕರರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ. ನಾವೂ ಕಾನೂನಿನ ಇತಿಮಿತಿಯಲ್ಲಿ ನಿರ್ಧಾರ ಮಾಡ್ಬೇಕು. ಮತ್ತೊಮ್ಮೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ತೀವಿ. ನೌಕರರಿಗೂ ಅಂತಿಮ ತೀರ್ಮಾನ ತಿಳಿಸಲು ಸೂಚಿಸಿದ್ದೇವೆ ಎಂದು ಸರ್ಕಾರಿ ನೌಕರರ ಜೊತೆಗಿನ ಸಭೆ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ರು.
ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ. ನೌಕರರೊಂದಿಗೆ ಸಂಧಾನ ಸಭೆ ನಡೆಸಿದ ಬೊಮ್ಮಾಯಿ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ತಡರಾತ್ರಿ ತುರ್ತು ಸಭೆ. ಸಚಿವರಾದ ಅಶೋಕ್, ಸುಧಾಕರ್, ಆರಗ, ಶ್ರೀರಾಮುಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಭಾಗಿ.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಸರ್ಕಾರಿ ನೌಕರರ ಮುಷ್ಕರದಿಂದಾಗಿ ಇಂದಿನಿಂದ ಜನಸಾಮಾನ್ಯರಿಗೆ ತುರ್ತು ಸರ್ಕಾರಿ ಸೇವೆಗೂ ಅಡಚಣೆ ಉಂಟಾಗಲಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಸೇವೆ ಬಿಟ್ಟು ಎಲ್ಲವೂ ಸ್ಥಗಿತಗೊಳ್ಳಲಿದೆ.
ರೈತರ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿ ಮೂಲಕ ಕಬಳಿಸುತ್ತಿರುವ ಸರ್ಕಾರದ ನೀತಿಗಳನ್ನು ವಿರೋಧಿಸಿ ರೈತರು ಇಂದಿನಿಂದ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯ ಚನ್ನರಾಯಪಟ್ಟಣ ಹಾಗೂ ಕುಂದಾಣ ಹೋಬಳಿಗಳಲ್ಲ ರೈತರ ಪಾದಯಾತ್ರೆ ನಡೆಯುತ್ತಿದೆ..
ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಯಲಿದೆ.. ಜಿಲ್ಲೆಯಾದ್ಯಂತ ಅಶ್ವತ್ಥ್ ನಾರಾಯಣ್ ವಿರುದ್ಧ ಪ್ರತಿಭಟನೆ ನಡೆಸಿ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಲಿದ್ದಾರೆ.
ಇಂದು ಮತ್ತೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ. ಎಲೆಕ್ಷನ್ ಹೊಸ್ತಿಲಲ್ಲಿ ಮತ್ತೆ ಸರ್ಕಾರದ ವಿರುದ್ಧ ಹೋರಾಟ. ಬೇಡಿಕೆಗಳನ್ನ ಈಡೇರಿಸುವಂತೆ ಸಾರಿಗೆ ನೌಕರರ ಆಗ್ರಹ. ಸಾರಿಗೆ ಸಿಬ್ಬಂದಿ ಅಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ಹೋರಾಟ. ಸಾರಿಗೆ ಇಲಾಖೆಯ 4 ನಿಗಮಗಳ ನೌಕರರಿಂದ ಪ್ರತಿಭಟನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.