ಬಂಧಿತರ ಮೂಲಕ ಹಳೆ ಪರೀಕ್ಷೆ ದಾಖಲೆಗಳ ತಲಾಶ್ ನಡೆಸಿದೆ. ಹಿಂದೆ ನೇಮಕವಾಗಿದ್ದ ಬಂಧಿತ ಪಿಎಸ್ಐಗಳೂ ಕೂಡ ಅಕ್ರಮವಾಗಿ ನೇಮಕವಾಗಿರುವ ಅನುಮಾನ ಮೂಡಿದ್ದು, ಅಂದು ಅಕ್ರಮದ ಮಾರ್ಗದಿಂದ ಇಲಾಖೆ ಸೇರಿ ಈಗ ಅಭ್ಯರ್ಥಿಗಳಿಗೆ ಮಧ್ಯವರ್ತಿಗಳಂತೆ ಕೆಲಸ ಮಾಡಿರುವ ಶಂಕೆ ವ್ಯಕ್ತವಾಗಿದೆ.
PSI ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್ ರಾಜಕೀಯ ಲಾಭ ಪಡೆಯಳು ಯತ್ನಿಸುತ್ತಿದೆ ಎಂದು ಚಿಕ್ಕೋಡಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ. ಮಾಡುವ ಆರೋಪಕ್ಕೆ ದಾಖಲೆ ಕೇಳಿದರೆ ಬೆನ್ನು ತೋರಿಸಿ ಓಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಬಹುಕೋಟಿ ರೂಪಾಯಿ ಹಗರಣ ಪಿಎಸ್ಐ ಕರ್ಮಕಾಂಡದ ಬಗ್ಗೆ ನಾನು ಗಾಳಿಯಲ್ಲಿ ಗುಂಡು ಹೊಡೆದಿಲ್ಲ. ಇದ್ದದ್ದನ್ನು ಇದ್ದ ಹಾಗೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ತಲಾ 30 ಲಕ್ಷ ರೂಪಾಯಿಯನ್ನು 25 ಅಭ್ಯರ್ಥಿಗಳಿಂದ ವಸೂಲಿ ಆಗಿದೆ ಅಂದರೆ, ಒತ್ತು ಮೊತ್ತ ಎಷ್ಟಾಯ್ತು? ಎಂದು ಎಚ್ಡಿಕೆ ಪ್ರಶ್ನಿಸಿದ್ದಾರೆ
PSI ನೇಮಕಾತಿ ಹಗರಣದಲ್ಲಿ ಮಂತ್ರಿಗಳಿಗೂ ಹಣ ಹೋಗಿದೆ. ಈ ಬಗ್ಗೆ ಅಭ್ಯರ್ಥಿಗಳೇ ಆರೋಪ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪ ಮಾಡಿದ್ದಾರೆ.. ಖಾನಾವಳಿಯಲ್ಲಿ ಇರುವಂತೆ ಎಲ್ಲ ಹುದ್ದೆಗೆ, ವರ್ಗಾವಣೆಗೆ ಇಂತಿಷ್ಟು ಎಂದು ಬೋರ್ಡ್ ಹಾಕಿಕೊಂಡು ಕುಳಿತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜಕೀಯ ಮುಖಂಡರು, ನೇಮಕಾತಿ ವಿಭಾಗದ ಅಧಿಕಾರಿ, ಸಿಬ್ಬಂದಿ, ಮಧ್ಯವರ್ತಿಗಳು ಹಾಗೂ ಆಭ್ಯರ್ಥಿಗಳು ಸೇರಿ ಸುಮಾರು 50ಕ್ಕಿಂತ ಹೆಚ್ಚು ಮಂದಿಯನ್ನು ಬಂಧಿಸಿ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವತ್ತ ಸಿಐಡಿ ತನಿಖೆ ಚುರುಕಿನಿಂದ ನಡೆಸುತ್ತಿದೆ.
ಅಕ್ರಮದ ಕಿಂಗ್ಪಿನ್ಗಳಾದ ಆರ್.ಡಿ ಪಾಟೀಲ್, ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಕಾಶಿನಾಥ್ ಚಿಲ್, ಮಹಾಂತೇಶ್ ಪಾಟೀಲ್ ಮನೆಯಲ್ಲಿ ಲಕ್ಷಾಂತರ ರೂ ಪತ್ತೆಯಾಗಿದೆ. ಸದ್ಯ ಈ ಹಣಗಳನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಇದೀಗ ಪಿಎಸ್ ಐ ಅಭ್ಯರ್ಥಿಗಳು ಪ್ರಧಾನಿಗೆ ರಕ್ತದಲ್ಲಿ ಬರೆದಿದ್ದಾರೆ ಎನ್ನಲಾದ ಪತ್ರ ಸಂಚಲನ ಮೂಡಿಸಿದೆ. ಪಿಎಸ್ ಐ ಪರೀಕ್ಷೆಯ ಅಕ್ರಮದಿಂದಾಗಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ವೀರಪ್ಪ ಮೋಯ್ಲಿ, ಈ ಸರ್ಕಾರದಲ್ಲಿ ಒಂದೊಂದೇ ಭ್ರಷ್ಟಾಚಾರ ಪ್ರಕರಣ ಬರುತ್ತಿವೆ. ಇದು ಗೃಹ ಸಚಿವರ ಜವಾಬ್ದಾರಿ ಅಂತ ಹೇಳಿದ್ರು. ಇನ್ನು ಇದೇ ವಿಚಾರದ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಏನ್ ಹೇಳಿದ್ರು ನೋಡೋಣ ಬನ್ನಿ....
ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಮೂಲದ ಮತ್ತೋರ್ವ ಆರೋಪಿ ಬಂಧನವಾಗಿದೆ. ಕಲಬುರಗಿಯಲ್ಲಿ ಯಶವಂತಗೌಡನನ್ನು ಬೆಂಗಳೂರು ಸಿಐಡಿ ವಶಕ್ಕೆ ಪಡೆದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.