ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಮುಖಸ್ಥ ರಾಹುಲ್ ಗಾಂಧಿ ರಫೇಲ್ ಒಪ್ಪಂದದಲ್ಲಿ ನಡೆಯುತ್ತಿರುವ ತನಿಖೆಯಿಂದ ಸರ್ಕಾರ ಭೀತಿಗೆ ಸಿಲುಕಿದೆ ಆದ್ದರಿಂದ ಅವರು ಸಿಬಿಐ ಮುಖ್ಯಸ್ಥ ಅಲೋಕ್ ಕುಮಾರ್ ಮೇಲೆ ಕ್ರಮ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.
ಎಚ್ಎಎಲ್ ಬಗ್ಗೆ ರಕ್ಷಣಾ ಮಂತ್ರಿ ನಿರ್ಮಲಾ ಸೀತಾರಾಮನ್ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಚ್ಎಎಲ್ ನೌಕರರೊಂದಿಗೆ ಕಬನ್ ಪಾರ್ಕ್ ಮಿನ್ಸ್ ಸ್ಕ್ವೇರ್ ಬಳಿ ದೇಶದ ರಕ್ಷಣಾ ವ್ಯವಸ್ಥೆಗೆ ಎಚ್ ಎಎಲ್ ಕೊಡುಗೆ ಏನು ಎಂಬ ವಿಷಯದ ಮೇಲೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಭಾರಿ ಹಗರಣ ನಡೆದಿದೆ ಎಂದು ವಿರೋಧ ಪಕ್ಷಗಳಿಂದ ಮೋದಿ ಸರ್ಕಾರ ಟೀಕೆಗೆ ಒಳಗಾಗಿದೆ.ಈಗ ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿಗೆ ಈಗ ಸ್ವಪಕ್ಷದವರಿಂದಲೇ ಈ ಕುರಿತಾಗಿ ಸ್ಪಷ್ಟನೆ ನೀಡುವಂತೆ ಒತ್ತಡ ಹೆಚ್ಚಾಗಿದೆ.
ಫ್ರಾನ್ಸ್ ನಿಂದ ಖರೀದಿ ಮಾಡಿರುವ 8.6 ಶತಕೋಟಿ ಡಾಲರ್ ಮೊತ್ತದ 36 ಯುದ್ದ ವಿಮಾನಗಳ ವ್ಯಾಪಾರದಿಂದ ಅನಿಲ್ ಅಂಬಾನಿ ಕಂಪನಿ ಲಾಭ ಪಡೆದಿದೆ ಇದಕ್ಕೆ ಸ್ವತಃ ಪ್ರಧಾನಿ ಮೋದಿಯವರೇ ನೇರವಾಗಿ ರಿಲಯನ್ಸ್ ಪರವಾಗಿ ವ್ಯವಹಾರ ಕುದುರಿಸಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪ ಮಾಡಿವೆ.
ಪ್ರಧಾನಿ ಮೋದಿ ವಿರುದ್ದ ಕಟು ಟೀಕೆ ಮುಂದುವರೆಸಿರುವ ರಾಹುಲ್ ಗಾಂಧಿ "ಫ್ರೆಂಚ್ ಮಾಜಿ ಅಧ್ಯಕ್ಷ ಭಾರತದ ಪ್ರಧಾನಿಯನ್ನು ಕಳ್ಳನೆಂದು ಕರೆದಿದ್ದಾರೆ.ಆದರೆ ಪ್ರಧಾನಿ ಇನ್ನು ಮೌನವಾಗಿದ್ದಾರೆ ಇದುವರೆಗೂ ಕೂಡ ಒಂದೇ ಒಂದು ಅಕ್ಷರವು ಸಹಿತ ಪ್ರಧಾನಿಯಿಂದ ಹೊರಬಂದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಮೋದಿ ವಿರುದ್ದ ಟೀಕಾ ಪ್ರಹಾರ ನಡೆಸಿದರು.
ರಫೇಲ್ ಯುದ್ದ ವಿಮಾನ ಖರೀದಿ ಒಪ್ಪಂದದಲ್ಲಿ ರಿಲಯನ್ಸ್ ಹೆಸರನ್ನು ಸೂಚಿಸಿದ್ದೆ ಮೋದಿ ಸರ್ಕಾರ ಎಂದು ಫ್ರಾನ್ಸ್ ಮಾಜಿ ಅಧ್ಯಕ್ಷ ಹೊಲಾಂಡ್ ಹೇಳಿದ್ದಾರೆ.ಆ ಮೂಲಕ ಈಗ ಅವರ ಹೇಳಿಕೆ ದೇಶದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.
ರಫೇಲ್ ಒಪ್ಪಂದದ ವಿಚಾರವಾಗಿ ಪ್ರಕಟಿಸಿದ ಲೇಖನಕ್ಕೆ ಪ್ರತಿಯಾಗಿ ರಿಲಯನ್ಸ್ ಮುಖ್ಯಸ್ಥ ಅನಿಲ್ ಅಂಬಾನಿ 5000 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ಕೇಸನ್ನು ನಾಷನಲ್ ಹೆರಾಲ್ಡ್ ಪತ್ರಿಕೆಯ ಮೇಲೆ ಹೂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.