ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಅವರು ಬುಧವಾರ 73 ನೇ ಗಣರಾಜ್ಯೋತ್ಸವದಂದು ಭಾರತವನ್ನು ಅಭಿನಂದಿಸಿದರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಂದ ವೈಯಕ್ತಿಕ ಸಂದೇಶವನ್ನು ಸ್ವೀಕರಿಸಿರುವುದಾಗಿ ಅವರು ತಿಳಿಸಿದ್ದಾರೆ.
ಈ ಬಾರಿ ಗಣರಾಜ್ಯೋತ್ಸವದ ಆಚರಣೆಯಲ್ಲಿ ಕೆಲವು ಹೊಸತನ ಮತ್ತು ಬದಲಾವಣೆಗಳಾಗಿವೆ. ಈ ಬಾರಿಯ ಪರೇಡ್ (Republic Day Parade) ಮತ್ತು ದೇಶದ ಗಣರಾಜ್ಯ ಆಚರಣೆ ಮೊದಲಿಗಿಂತ ಹೆಚ್ಚು ಅದ್ಭುತವಾಗಿ ಕಂಗೊಳಿಸಲಿದೆ.
Republic Day Parade 2022: ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಜ್ಪಥ್ನಿಂದ ಹೊರಡುವ ಅದ್ಭುತ ಮೆರವಣಿಗೆ ಮತ್ತು ಸುಂದರವಾದ ಟ್ಯಾಬ್ಲಾಕ್ಸ್ ಅನ್ನು ನೋಡಲು ದೇಶದ ಮೂಲೆ ಮೂಲೆಗಳಿಂದ ಜನರು ದೆಹಲಿಗೆ ಬರುತ್ತಾರೆ. ಈ ಬಾರಿಯ ಗಣರಾಜ್ಯೋತ್ಸವದ ಕಾರ್ಯಕ್ರಮವನ್ನು ಯಾವಾಗ, ಎಲ್ಲಿ ಮತ್ತು ಹೇಗೆ ನೋಡಬೇಕು. ಲೈವ್ ಸ್ಟ್ರೀಮ್ ಮೂಲಕ ನೀವು ಈ ಗ್ರ್ಯಾಂಡ್ ಈವೆಂಟ್ನಲ್ಲಿ ಎಲ್ಲಿ ಭಾಗವಾಗಬಹುದು? ಎಂದು ತಿಳಿಯಲು ಮುಂದೆ ಓದಿ...
ನವದೆಹಲಿಯಗಣರಾಜ್ಯೋತ್ಸವದ ಸ್ತಬ್ದ ಚಿತ್ರಗಳ ಪರೇಡ್'ಗೆ ಜಿಲ್ಲೆಯ ಸುಪ್ರಸಿದ್ಧ ಇಳಕಲ್ ಸೀರೆ ಹಾಗೂ ಗುಳೇದಗುಡ್ಡದ ಖಣ(ಕುಪ್ಪಸ) ಯಾಗಿದ್ದು ಜಿಲ್ಲೆಯ ನೇಕಾರರಲ್ಲಿ ಸಂಭ್ರಮ ಮನೆ ಮಾಡುವಂತೆ ಮಾಡಿದೆ.
ಸ್ತಬ್ಧಚಿತ್ರವನ್ನು ಏಕೆ ತಿರಸ್ಕರಿಸಲಾಗಿದೆ ಎಂದು ಆಯಾ ರಾಜ್ಯಗಳಿಗೆ ಕೇಂದ್ರ ರಕ್ಷಣಾ ಇಲಾಖೆಯೇ ಸ್ಪಷ್ಟಪಡಿಸಿದೆ. ಇಷ್ಟರ ಮೇಲೂ ಸಿದ್ದರಾಮಯ್ಯ ಅವರು ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.
ಈ ನೆಲದ ನಿಜ ಸಮಾಜ ಸುಧಾರಕರನ್ನು ಕೋಮುವಾದಿ-ಜಾತಿವಾದಿ ಬಿಜೆಪಿ ಅಂತರಂಗದಲ್ಲಿ ದ್ವೇಷಿಸುತ್ತದೆ, ಬಹಿರಂಗವಾಗಿ ಕೊಂಡಾಡುತ್ತಾ ನಾಟಕವಾಡುತ್ತದೆ. ಈ ಆತ್ಮವಂಚನೆಯನ್ನು ನಿಲ್ಲಿಸಿ ಅಂತಾ ಸಿದ್ದರಾಮಯ್ಯ ಕುಟುಕಿದ್ದಾರೆ.
Republic Day 2022: ಗಣರಾಜ್ಯೋತ್ಸವ 2022 ರ ಮೊದಲು ಸಂಭವನೀಯ ಭಯೋತ್ಪಾದಕ ದಾಳಿಯ ಬಗ್ಗೆ ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಲಭ್ಯವಾಗಿರುವ ಹಿನ್ನಲೆಯಲ್ಲಿ ದೆಹಲಿ-ಎನ್ಸಿಆರ್ನಲ್ಲಿ ಹೆಚ್ಚಿನ ಭದ್ರತಾ ಎಚ್ಚರಿಕೆಯನ್ನು ನೀಡಲಾಗಿದೆ.
ಗಣರಾಜ್ಯೋತ್ಸವ ಪರೇಡ್ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ವಿಚಾರವಾಗಿ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದ ಈ ವಿಚಾರವಾಗಿ ಕೇಂದ್ರ ಸರ್ಕಾರ ದೇಶದ ಕ್ಷಮೆಯನ್ನು ಕೋರಬೇಕು ಎಂದು ಆಗ್ರಹಿಸಿದ್ದಾರೆ.
ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ ವರೆಗೆ ವಿಸ್ತರಿಸಿರುವ ಸೆಂಟ್ರಲ್ ವಿಸ್ಟಾ ಅವೆನ್ಯೂದ ಪುನರಾಭಿವೃದ್ಧಿ ಕಾರ್ಯಗಳು ಈ ನವೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿರುವುದರಿಂದ ಮುಂದಿನ ವರ್ಷ ಗಣರಾಜ್ಯೋತ್ಸವದ ಮೆರವಣಿಗೆ ನವೀಕರಿಸಿದ ರಾಜ್ಪತ್ನಲ್ಲಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.