Bhuvanam Gaganam:ಎಸ್ವಿಸಿ ಫಿಲಂಸ್ ಬ್ಯಾನರ್ನಡಿಯಲ್ಲಿ ಎಂ.ಮುನೇಗೌಡ ನಿರ್ಮಿಸಿರುವ ಭುವನಂ ಗಗನಂ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ. ಫೆಬ್ರವರಿ 14ರಂದು ಪ್ರೇಮಿಗಳ ದಿನದ ಸ್ಪೆಷಲ್ ಆಗಿ ಚೆಂದದ ಪ್ರೇಮಕಥಾಹಂದರ ಹೊಂದಿರುವ ಚಿತ್ರ ತೆರೆಗೆ ಬರ್ತಿದೆ. ಲವರ್ ಬಾಯ್ ಆಗಿ ಗಮನಸೆಳೆದಿರುವ ಪೃಥ್ವಿ ಅಂಬರ್ ಹಾಗೂ ರಗಡ್ ಪಾತ್ರಗಳ ಮೂಲಕ ಖ್ಯಾತಿ ಪಡೆದಿರುವ ಪ್ರಮೋದ್ ನಾಯಕರಾಗಿ ಭುವನಂ ಗಗನಂನಲ್ಲಿ ನಟಿಸಿದ್ದಾರೆ.
Martin trailer 1: ಧ್ರುವ ಸರಾಜಾ ಅಭಿನಾಯದ ಮಾರ್ಟಿನ್ ಚಿತ್ರ ಅನೌಂನ್ಸ್ ಆದಾಗಿನಿಂದಲೂ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಸುದೀರ್ಘ ಕಾಯುವಿಕೆಯ ನಂತರ ಮಾರ್ಟಿನ್ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ. ಇದರ ಬೆನ್ನಲ್ಲೆ ಆಗಸ್ಟ್ 05 ರಂದು ಚಿತ್ರತಂಡ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿದ್ದು, ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ.
Sandalwood News: ಅಂದಹಾಗೆ ಈ ಎಲ್ಲಾ ಸಿನಿಮಾಗಳಲ್ಲೂ ಮೇಲ್ನೋಟಕ್ಕೆ ಕಾಣಿಸುತ್ತಿರುವ ಹೋಲಿಕೆ ‘ಕ’ ಅಕ್ಷರ. ಹೌದು.. ಈ ಅಕ್ಷರದಿಂದ ಶುರುವಾದ ಸಿನಿಮಾಗಳು 2023ರಲ್ಲಿ ಸಖತ್ ಹೆಸರು ಮಾಡಿ, ಬಾಕ್ಸ್ ಆಫೀಸ್ ಕೊಳ್ಳೆಹೊಡೆದಿತ್ತು.
ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುವ ಹುಡುಗಿಯೊಬ್ಬಳು ಅಲ್ಲಿ ಏನೇನು ಶೋಷಣೆಗಳನ್ನು ಅನುಭವಿಸುತ್ತಾಳೆ ಎನ್ನುವುದರ ಸುತ್ತ ‘ನಾನು ಕುಸುಮ’ ಸಿನಿಮಾದ ಕಥಾಹಂದರ ಸಾಗುತ್ತದೆ. ಗ್ರೀಷ್ಮಾ ಶ್ರೀಧರ್, ಸನಾತನಿ ಜೋಶಿ, ಕಾವ್ಯಾ ಶ್ರೀಧರ್, ಕೃಷ್ಣೇಗೌಡ, ಸೌಮ್ಯ ಭಾಗವತ್, ಪ್ರತಿಭ ಸಂಶಿಮಠ್, ವಿಜಯ್ ಮೊದಲಾದವರು ‘ನಾನು ಕುಸುಮ’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ
ಜೇಮ್ಸ್ ಖ್ಯಾತಿಯ ಚೇತನ್ ಕುಮಾರ್ ರಚಿಸಿರುವ ಮಧುರ ಮಧುರ ಹಾಡನ್ನು ಅನಿಲ್ ಸಿ.ಜೆ ಮತ್ತು ವಾರಿಜಾಶ್ರೀ ವೇಣುಗೋಪಾಲ್ ಹಾಡಿದ್ದಾರೆ. ಮಾಧುರ್ಯ ತುಂಬಿದ ಈ ಹಾಡನ್ನು ವಿಶೇಷವಾಗಿ ನಿರ್ಮಿಸಲಾಗಿರುವ ಸೆಟ್ನಲ್ಲಿ ಚಿತ್ರೀಕರಣ ಮಾಡುವುದರ ಜೊತೆಗೆ, ಕುಮಟದ ಸುಂದರ ಪರಿಸರದಲ್ಲಿ ಸೆರೆ ಹಿಡಿಯಲಾಗಿದೆ.
ನೈಜ ಘಟನೆ ಆಧಾರಿತ ಈ ಚಿತ್ರದಲ್ಲಿ ಚಂದನ್ ರಾಜ್, ಅಶ್ವಿನ್ ಹಾಸನ್, ಮಹಾಲಕ್ಷ್ಮೀ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಸೂರ್ಯಕಿರಣ್, ಪ್ರಭು ಹೊಸದುರ್ಗ, ಟೈಗರ್ ಗಂಗ, ಜಗದೀಶ್, ರಾಘವೇಂದ್ರ, ವಿಶಾಲ್ ಪಾಟೀಲ್, ರವಿ ಸಾಲಿಯನ್, ಲೋಕೇಶ್ ಗೌಡ, ಭೀಷ್ಮ, ಸುಧೀನ್ ನಾಯರ್ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ತಾರಾಬಳಗದಲ್ಲಿದ್ದಾರೆ.
'ಕೆರೆಬೇಟೆ' ಅನ್ನೋದು ನಿಜಕ್ಕೂ ಮಲೆನಾಡಿನಲ್ಲಿ ವಿಶೇಷವಾಗಿಯೇ ನಡೆಯುತ್ತದೆ. ಕೆರೆ ಬತ್ತಿ ಶೇ.70ರಷ್ಟು ನೀರು ಬತ್ತಿದಾಗ ಮೀನು ಹಿಡಿಯೋದನ್ನೇ ಇಲ್ಲಿ 'ಕೆರೆಬೇಟೆ' ಅಂತಲೇ ಕರೆಯುತ್ತಾರೆ.
ಜನಪ್ರಿಯ ನಟ ಸೋನು ಸೂದ್ ಇದೀಗ ಕರುನಾಡಿನಲ್ಲಿ ಕೃಷಿ ಮಾಡಲು ಮುಂದಾಗಿದ್ದಾರೆ. ಅರೇ ಇದ್ಯಾಕಪ್ಪ ಕರುನಾಡನ್ನೇ ಆಯ್ಕೆ ಮಾಡ್ಕೊಂಡ್ರು ಅಂತ ನಿಮ್ಗೆ ಅನಿಸಬಹುದು. ಯೆಸ್ ಸ್ಯಾಂಡಲ್ವುಡ್ನಲ್ಲಿ ರೈತನಾಗಲು ರೆಡಿ ಆಗಿದ್ದಾರೆ. ಶ್ರೀಮಂತ ಅನ್ನೋ ಕನ್ನಡ ಸಿನಿಮಾದಲ್ಲಿ ಮೊದಲ ಬಾರಿ ನಾಯಕನಾಗಿ ಕಾಣಿಸಿಕೊಳ್ಳಲು ಸಕಲ ರೀತಿಯಲ್ಲಿ ಸಜ್ಜಾಗಿ ನಿಂತಿದ್ದಾರೆ ನಟ ಸೋನು ಸೂದ್.
ವಸಿಷ್ಠ ಬಂಟನೂರು ಮಾತನಾಡಿ, 1975 ಇದು ನನ್ನ ಎರಡನೇ ಕನಸು. ನನ್ನ ಕನಸು ನನಸು ಮಾಡಲು ಕೈ ಜೋಡಿಸಿದ ನನ್ನ ತಂಡದವರು, ನಿರ್ಮಾಪಕರೂ ಎಲ್ಲರಿಗೂ ಧನ್ಯವಾದ. ಇದೊಂದು ಥ್ರಿಲ್ಲರ್ ಬೇಸ್ ಸಿನಿಮಾ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.