List of Temples are females not allowed in India: ದೇಶದ ಸಂವಿಧಾನದಲ್ಲಿ ಎಲ್ಲರಿಗೂ ಸಮಾನವಾಗಿ ದೇವಾಲಯಗಳನ್ನು ಪ್ರವೇಶಿಸಲು ಅವಕಾಶವಿದೆ, ಏಕೆಂದರೆ ದೇವಸ್ಥಾನಗಳಲ್ಲಿ ಎಲ್ಲರೂ ಸಮಾನರು. ಆದರೆ ಭಾರತದ ಕೆಲ ದೇವಾಲಯಗಳಲ್ಲಿ ಅದಕ್ಕೆ ಅವಕಾಶವಿಲ್ಲ. ಒಂದಷ್ಟು ಧಾರ್ಮಿಕ ಕೇಂದ್ರಗಳಲ್ಲಿ ಮಹಿಳೆಯರಿಗೆ ಪ್ರವೇಶ ನಿಷಿದ್ಧವಾಗಿದ್ದರೆ, ಇನ್ನೂ ಕೆಲವಷ್ಟು ದೇಗುಲಗಳಲ್ಲಿ ಪುರುಷರಿಗೆ ಪ್ರವೇಶವಿಲ್ಲ.
ಕೇರಳದ ಶಬರಿಮಲೆ ದೇವಾಲಯಕ್ಕೆ ಮಹಿಳೆಯರನ್ನು ಪ್ರವೇಶಿಸುವ ಪ್ರಯತ್ನ ಯಶಸ್ವಿಯಾಗಿದೆ. ಇಂದು ಮುಂಜಾನೆ ಸುಮಾರು 3:45ರ ವೇಳೆ ಭದ್ರತೆಯೊಂದಿಗೆ ತೆರಳಿ ಮಹಿಳೆಯರು ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದಾರೆ.
ಶಬರಿಮಲೆ ದೇಗುಲಕ್ಕೆ 10 ರಿಂದ 50 ವರ್ಷದ ಮಹಿಳೆಯರಿಗೂ ಪ್ರವೇಶ ನೀಡಲು ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ಇಂದು ತನ್ನ ತೀರ್ಪು ಪ್ರಕಟಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.