Nikhil Kumaraswamy: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಸೇರಿದಂತೆ ಕರ್ನಾಟಕದ ಮೂರು ಭಾಗಗಳಲ್ಲಿ ಉಪ ಚುಣಾವಣೆ ನಡೆದಿತ್ತು, ಇಂದು ಈ ಎಲ್ಲಾ ಮೂರು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ವಿರುದ್ಧ ಕಾಂಗ್ರೇಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.
ಅಜಿತ್ ಪವಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಮತ್ತು ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಅವರು ಸಿಎಂ ಶಿಂಧೆ ನಿರ್ಧಾರವನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ.
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಏಕನಾಥ್ ಶಿಂಧೆಗೆ ಅಭಿನಂದಿಸಿದ್ದಾರೆ. ಸತಾರಾದಿಂದ ಶಿಂಧೆ ಮುಖ್ಯಮಂತ್ರಿಯಾಗುತ್ತಿರುವುದು ನನಗೆ ಖುಷಿ ತಂದಿದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಬಿಜೆಪಿ ನಾಯಕರು ಸಂಭ್ರಮಾಚರಣೆ ನಡೆಸಿದ್ದಾರೆ.. ಉದ್ಧವ್ ರಾಜೀನಾಮೆ ಬೆನ್ನಲ್ಲೇ ಕಮಲ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಖಾಸಗಿ ಹೋಟೆಲ್ನಲ್ಲಿ ಮಾಜಿ ಸಿಎಂ ಫಡ್ನವೀಸ್ಗೆ ಸಿಹಿ ತಿನ್ನಿಸಿ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.
15 ದಿನಗಳ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನವಾಗಿದೆ.. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಉದ್ಧವ್ ಫೇಸ್ಬುಕ್ ಲೈವ್ನಲ್ಲಿ ರಾಜೀನಾಮೆ ಘೋಷಿಸಿದ್ದಾರೆ. ಇಂದು ವಿಶ್ವಾಸಮತ ಯಾಚಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ವಿಶ್ವಾಸಮತ ಯಾಚನೆಗೂ ಮೊದಲೇ ರಾಜೀನಾಮೆ ಘೋಷಣೆ ಮಾಡಲಾಗಿದೆ.
ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಬಂಡಾಯ ಶಾಸಕರ ಮನವೊಲಿಸುವಲ್ಲಿ ನಿರತರಾಗಿದ್ದಾರೆ. ಇದಕ್ಕಾಗಿ ನಿರಂತರವಾಗಿ ಶಾಸಕರ ಪತ್ನಿಯರನ್ನು ಸಂಪರ್ಕಿಸುತ್ತಿದ್ದಾರಂತೆ. ಬಂಡಾಯ ಶಾಸಕರ ಪತ್ನಿಯರ ಮೂಲಕ ತಮ್ಮ ಮಾತುಗಳನ್ನು ತಿಳಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಶಿವಸೇನಾ ಶಾಸಕ ಮತ್ತು ಸಚಿವ ಏಕನಾಥ್ ಶಿಂಧೆ ಸರ್ಕಾರದ ವಿರುದ್ದ ಬಂಡಾಯವೆದ್ದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸುವ ಸಂದರ್ಭ ಎದುರಾಗಬಹುದು. ಬಹುಮತ ಸಾಬೀತಿಗೆ ರಾಜ್ಯಪಾಲರು ಒಪ್ಪಿಗೆ ನೀಡುತ್ತಾರೆ.
‘ಶಿವಸೇನೆ’ ಮತ್ತು ‘ಮಾತೋಶ್ರೀ’ ಜೊತೆ ಆಟವಾಡಬೇಡಿ. ಶಿವಸೈನಿಕರ ತಾಳ್ಮೆಯನ್ನು ಪರೀಕ್ಷಿಸಬೇಡಿ. ತಾಳ್ಮೆ ಪರೀಕ್ಷಿಸಿದರೆ ನಾವು ಏನು ಅನ್ನೋದನ್ನು ತೋರಿಸಬೇಕಾಗುತ್ತದೆ ಎಂದು ರಾವತ್ ಕಿಡಿಕಾರಿದ್ದಾರೆ.
ಮುಂದಿನ ವರ್ಷ ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ಮುಂಚಿತವಾಗಿ ಈಗ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುವ ಬಗ್ಗೆ ನೀಡಿರುವ ಹೇಳಿಕೆ ಈಗ ಮಹಾರಾಷ್ಟ್ರದ ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ಸೂಚನೆಯನ್ನು ನೀಡಿದೆ.
ಶಿವಸೇನೆ ಮುಖಂಡ ಸಂಜಯ್ ರೌತ್ ಬಿಜೆಪಿ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾದ ಒಂದು ದಿನದ ನಂತರ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದರು.
ಶಿವಸೇನಾ ಮುಖಂಡ ಸಂಜಯ್ ರಾವುತ್ ಅವರ 'ಮುಂಬೈ ಹಿಂದಿರುಗುವಿಕೆ ಇಲ್ಲ' ಎಚ್ಚರಿಕೆಗೆ ಖ್ಯಾತ ಬಾಲಿವುಡ್ ನಟಿ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದಾರೆ. ಬರುವ ಸೆಪ್ಟೆಂಬರ್ 9ರಂದು ನಾನು ಮುಂಬೈಗೆ ಬರುತ್ತಿರುವೇನು ಎಂದು ನಾನು ನನ್ನಗೆ ಮುಂಬೈಗೆ ಬರದಿರಲು ಹೇಳುತ್ತಿರುವವರಿಗೆ ಹೇಳಲು ಬಯಸುತ್ತೇನೆ ಎಂದು ಕಂಗನಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.