ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನಾವು ಕೊಟ್ಟಿದ್ದು 408.02 ಕೋಟಿ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ 880.65 ಕೋಟಿ ಸೇರಿ ಒಟ್ಟು 1288.67 ಕೋಟಿ ಕೊಟ್ಟೆವು. ಆದರೆ ಬಿಜೆಪಿ ಸರ್ಕಾರ ತಮ್ಮ ಅವಧಿಯಲ್ಲಿ ಕೊಟ್ಟ ವಿದ್ಯಾರ್ಥಿ ವೇತನ ಕೇವಲ 650.78 ಕೋಟಿ ಮಾತ್ರ ಎಂದು ದಾಖಲೆ ತೋರಿಸಿ ಹೇಳಿದರು.
ಎಸ್ಸಿ, ಎಸ್ಟಿ ಸಮುದಾಯಕ್ಕೆ ಬೊಮ್ಮಾಯಿ ದೀಪಾವಳಿ ಗಿಫ್ಟ್ ನೀಡಿದ್ದಾರೆ. SC ಮತ್ತು ST ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
SC, ST ಶಕ್ತಿ ನೀಡಬೇಕೆಂದು ತೀರ್ಮಾನ ಮಾಡಿದ್ದೇವೆ. ಸರ್ಕಾರದ ಆದೇಶದಲ್ಲಿ ನಾವು ಸ್ಪಷ್ಟ ಪಡಿಸುತ್ತಿದ್ದೇವೆ. SC ಮತ್ತು STಗೆ ಮಾತ್ರ ಮೀಸಲಾತಿ ಹೆಚ್ಚಳವಾಗುತ್ತೆ. ಬೇರೆ ಸಮುದಾಯಗಳ ಮೀಸಲಾತಿ ಬಗ್ಗೆ ಚರ್ಚೆಗಳಿಲ್ಲ ಎಂದು ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ಮೇ 13 ರಂದು ಸರ್ಕಾರ ಹೊರಡಿಸಿದ ಆದೇಶದಲ್ಲಿ ಗ್ರಾಮೀಣ ಭಾಗದ ಬಡವರಿಗೆ ಮಾತ್ರ ಯೋಜನೆ ಸೌಲಭ್ಯ ಇತ್ತು. ಹಳೆ ಆದೇಶವನ್ನು ಹಿಂದಕ್ಕೆ ಪಡೆದು ಹೊಸ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 979 ಕೋಟಿ ರೂ. ಹೊರೆಯಾಗಲಿದೆ.
ಪರಿಶಿಷ್ಠ ಪಂಗಡದ ಮೀಸಲು ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ನಡೆಸುತ್ತಿರುವ ಧರಣೆಗೆ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.
Supreme Court Latest Update: ಸರ್ಕಾರಿ ನೌಕರಿಗಳಲ್ಲಿ (Government Jobs) SC-ST ಜನರಿಗೆ ಪ್ರಮೋಶನ್ (Pramotion) ವೇಳೆ ಮೀಸಲಾತಿ ನೀಡುವ ಕುರಿತು ಮಾನದಂಡ ನಿಗದಿಪಡಿಸಲು ಸರ್ವೋಚ್ಛ ನ್ಯಾಯಾಲಯ (Supreme Court) ನಿರಾಕರಿಸಿದೆ.
ಸಂಸತ್ತಿನಲ್ಲಿ ಪ್ರತಿಪಕ್ಷದ ಗಲಾಟೆ ನಡುವೆ ಈಗ ಟೀಕಾ ಪ್ರಹಾರ ನಡೆಸಿರುವ ಪ್ರಧಾನಿ ಮೋದಿ ಕೆಲವರಿಗೆ ಹೆಚ್ಚಿನ ಮಹಿಳೆಯರು,ಎಸ್ಸಿ ಮತ್ತು ಎಸ್ಟಿಗಳು ಸಚಿವರಾಗುತ್ತಿದ್ದಾರೆ ಎನ್ನುವುದನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.
ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್ಎಸ್ಎಸ್ ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ತಂದು ರಾಜ್ಯ ಸರ್ಕಾರ ಫೆ.27ರಂದು ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿಗಳು ಯಾವುದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದರೂ ಈ ಸಹಾಯವಾಣಿಗೆ ಕರೆ ಅಥವಾ ವಾಟ್ಸ್ಅಪ್ ಮಾಡುವ ಮೂಲಕ ತಮ್ಮ ಸಮಸ್ಯೆ ಹೇಳಿಕೊಳ್ಳಬಹುದು. ಜೊತೆಗೆ ಸಲಹೆಗಳನ್ನು ನೀಡಬಹುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.