ಲೋಕಸಭೆಯಲ್ಲಿ ಬಿಜೆಪಿಗೆ ಭಾರಿ ಬಹುಮತವಿದೆ. ಲೋಕಸಭೆಯಲ್ಲಿ ಬಿಜೆಪಿ ಮತ್ತು ಎನ್ಡಿಎ ಒಟ್ಟು 303 ಸಂಸದರನ್ನು ಹೊಂದಿದೆ. ಅಷ್ಟೇ ಅಲ್ಲದೆ, ರಾಜ್ಯಸಭೆಯಲ್ಲಿ ಬಿಜೆಪಿ 91 ಸಂಸದರನ್ನು ಹೊಂದಿದೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ 3 ಸ್ಥಾನಗಳನ್ನು ಕಳೆದುಕೊಂಡಿದ್ದರೆ, ಉಪಚುನಾವಣೆಯಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಗಳಿಸಿದೆ.
ಖೇಲೋ ಇಂಡಿಯಾ (Khelo India) ಯೂನಿವರ್ಸಿಟಿ ಗೇಮ್ಸ್ 2021 ಎರಡನೇ ಆವೃತ್ತಿ ಯಶಸ್ವಿ ಆಯೋಜನೆಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ (Narayangowda) ಅವರು ತಿಳಿಸಿದರು.
ಕೇಂದ್ರ ಸರ್ಕಾರದಿಂದ ಹೊಸ ಐಟಿ ನಿಯಮಗಳನ್ನು ರೂಪಿಸಿ ಅಧಿಸೂಚನೆಯನ್ನು ಹೊರಡಿಸಿತ್ತು. ಅದಕ್ಕೆ ಮೇ.15ರವರೆಗೆ ಆಕ್ಷೇಪಣೆಗೆ ಕಾಲಾವಕಾಶ ಕೂಡ ನೀಡಲಾಗಿತ್ತು. ಈಗ ಕಾಲಾವಕಾಶ ಮುಕ್ತಾಯಗೊಂಡಿದೆ. ಈಗಾಗಲೇ ವಾಟ್ಸ್ ಆಪ್ ಸೇರಿದಂತೆ ಅನೇಕ ಸೋಷಿಯಲ್ ಮೀಡಿಯಾಗಳಿಗೆ ಹೊಸ ಐಟಿ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದ್ದಂತ ಕೇಂದ್ರ ಸರ್ಕಾರ, ಈಗ ಟ್ವಿಟ್ಟರ್ ಗೆ ಅಂತಿಮ ಸೂಚನೆ ನೀಡಿದೆ.
ಇತ್ತೀಚಿಗೆ ಕೊರೋನಾಗೆ ಒಳಗಾಗಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಈಗ ಗುಣಮುಖರಾಗಿದ್ದಾರೆ.ನಿಯಮಿತ ವ್ಯಾಯಾಮ , ಪ್ರೋಟೀನ್ ಭರಿತ ಆಹಾರ ಸೇವನೆ, ಜಂಕ್ ಫುಡ್ ನ್ನು ತಪ್ಪಿಸುವುದು ಮತ್ತು ರೋಗವನ್ನು ತಡೆಗಟ್ಟುವ ಪ್ರೋಟೋಕಾಲ್ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಪ್ರತಿಯೊಬ್ಬರನ್ನು ಕೋರಿದ್ದಾರೆ.
ರುಟೀನ್ ಚೆಕ್ ಅಪ್ ನಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ವೆಂಕಯ್ಯ ನಾಯ್ಡು ಅವರೇ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಒಂದು ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.
ಒಂದು ವೇಳೆ ಏಪ್ರಿಲ್ 14 ರ ನಂತರ ಸಂಕಷ್ಟಗಳು ಮುಂದುವರಿದರೆ ಕರೋನವೈರಸ್ ಲಾಕ್ಡೌನ್ ನ ಯಾವುದೇ ನಿರ್ಧಾರಕ್ಕೆ ಜನರು ಬದ್ಧರಾಗಿರಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.ಈಗ ತೆಲಂಗಾಣ, ಉತ್ತರ ಪ್ರದೇಶ ಮತ್ತು ಅಸ್ಸಾಂನಂತಹ ರಾಜ್ಯಗಳಿಂದ ನಿರ್ಬಂಧಗಳನ್ನು ವಿಸ್ತರಿಸುವ ಕರೆಗಳ ನಡುವೆ ಅವರ ಹೇಳಿಕೆ ಬಂದಿದೆ.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸಾಧ್ಯವಾದಷ್ಟು ಭಾಷೆಗಳನ್ನು ಕಲಿಯಬೇಕೆಂದು ಕರೆ ನೀಡಿದರು ಮತ್ತು ಯಾವುದೇ ಭಾಷೆಯ ಹೇರಿಕೆ ಇರಬಾರದು, ಯಾವುದೇ ನಿರ್ದಿಷ್ಟ ಭಾಷೆಯ ವಿರುದ್ಧ ವಿರೋಧ ಇರಬಾರದು ಎಂದು ಪ್ರತಿಪಾದಿಸಿದರು.
'ನಾವು ಯಾರ ಮೇಲೂ ದಾಳಿ ಮಾಡುವುದಿಲ್ಲ, ಆದರೆ ನಮ್ಮ ಮೇಲೆ ಯಾರು ಹಲ್ಲೆ ಮಾಡಿದರೂ, ನಾವು ಅವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತೇವೆ. ನಾವು ಯುದ್ಧೋಚಿತರಲ್ಲ- ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು
ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಇಂದು ಆಂಧ್ರಪ್ರದೇಶದ ತಮ್ಮ ಹಳೆಯ ಸ್ನೇಹಿತ ಮಾಜಿ ಕೇಂದ್ರ ಸಚಿವ ಎಸ್ ಜೈಪಾಲ್ ರೆಡ್ಡಿ ಅವರನ್ನು ನೆನೆದು ಕಣ್ಣೀರಿಟ್ಟರು. ರಾಜ್ಯಸಭೆಯಲ್ಲಿ ಶ್ರದ್ದಾಂಜಲಿ ಸಲ್ಲಿಸುವ ವೇಳೆ ಅವರು ಭಾವನಾತ್ಮಕ ಕ್ಷಣಕ್ಕೆ ಜಾರಿದರು.
1999 ರಿಂದ ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳು ತಪ್ಪಾಗಿವೆ. ಚುನಾವಣೋತ್ತರ ಸಮೀಕ್ಷೆಗಳು ಚುನಾವಣೆಯ ನಿಜವಾದ ಫಲಿತಾಂಶಗಳಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.