ಫೆಂಗಲ್ ಚಂಡಮಾರುತ ಎಫೆಕ್ಟ್ ಬೆಂಗಳೂಗರು ಗಢಗಢ
ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ
ಇಂದು ಕೋಲಾರ, ಚಿಕ್ಕಬಳ್ಳಾಪುರ ಶಾಲಾ-ಕಾಲೇಜಿಗೆ ರಜೆ
ಮಲೆನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರಲ್ಲಿ ಮುಂದಿನ 48 ಗಂಟೆ ಭಾರೀ ಮಳೆ ಸಾಧ್ಯತೆ
Cyclone Fengal Effect: ಫೆಂಗಲ್ ಚಂಡಮಾರುತ ಪ್ರಭಾವದಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪ್ರಭಾವದಿಂದಾಗಿ ಕೆಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ
16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ಉಡುಪಿ
ಚಿಕ್ಕಮಗಳೂರು, ಧಾರವಾಡ, ಬೆಂಗಳೂರು ಗ್ರಾ.
ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಅಕ್ಟೋಬರ್ 9 ರವರೆಗೆ 12 ಜಿಲ್ಲೆಗಳಿಗೆ ಯೆಲ್ಲೋ ಆರ್ಲಟ್ ಘೋಷಣೆಯಾಗಿದೆ.
Karnataka Weather Report: ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮತ್ತೆ ಮಳೆಯ ಮುನ್ಸೂಚನೆ
ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ
ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ
ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ನಿನ್ನೆ ಭಾರಿ ಮಳೆಗೆ ನಲುಗಿದ್ದ ಬೆಂಗಳೂರು ಮಂದಿ
Karnataka Rain Alert: ಮುಂದಿನ 48 ಗಂಟೆಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
IMD : ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಧಾರಣ ಮಳೆ ಮತ್ತು ಗುಡುಗುಸಹಿತಬಿರುಗಾಳಿಗಳು, ಕೆಲವು ಪ್ರದೇಶಗಳಲ್ಲಿ ಸಾಂದರ್ಭಿಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 22 ° C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ.
ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯ ಮುನ್ಸೂಚನೆ
ದಕ್ಷಿಣ ಒಳನಾಡು ಸೇರಿ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ
ತುಮಕೂರು, ಬೀದರ್, ಕಲಬುರಗಿ, ರಾಯಚೂರಿನಲ್ಲಿ ಮಳೆ
ಕರ್ನಾಟಕದಲ್ಲಿ ಮತ್ತೆ ಅಬ್ಬರಿಸಲಿದ್ದಾನೆ ವರುಣ..!
ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ
ದಕ್ಷಿಣ ಒಳನಾಡಿನ ಕೊಡಗು, ಮಂಡ್ಯಗೆ ಯೆಲ್ಲೋ ಅಲರ್ಟ್
ಬೆಂಗಳೂರು ನಗರದಲ್ಲೂ ಭಾರಿ ಮಳೆ ಮುನ್ಸೂಚನೆ
Rain Alert: ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಲೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ 4 ದಿನ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಗುರುವಾರದಿಂದ ವಿಪರೀತ ಮಳೆಯ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋಅಲರ್ಟ್ ಘೋಷಣೆ ಮಾಡಲಾಗಿದೆ.
ಕಾವೇರಿ ನದಿ ಪ್ರವಾಹ ಹಿನ್ನಲೆಯಲ್ಲಿ ನಿಮಿಷಾಂಭ ದೇಗುಲದ ಬಳಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು ದೇಗುಲದ ಬಳಿ ಸ್ನಾನಘಟ್ಟ ಸೇರಿ ಸ್ನಾನ ಗೃಹ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಕಾವೇರಿ ನದಿ ದಂಡೆಯ ಬಳಿ ದೇಗುಲದ ಬಳಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.
ಇದಲ್ಲದೆ, ಕಳೆದ ಮೂರ ದಿನಗಳಿಂದ ಬೆಳಗಾವಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿ ರಣಮಳೆಯ ಆರ್ಭಟಿಸಿದೆ. ಮಳೆಯಿಂದ ರಾಜ್ಯದಲ್ಲಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ಜಲಾಶಯಗಳು ಬೋರ್ಗರೆಯುತ್ತಿದ್ದು, ಗ್ರಾಮ ಗ್ರಾಮಗಳೇ ಜಲಾವೃತವಾಗಿವೆ.. ಹಳ್ಳಿಗಳ ಸಂಪರ್ಕ ಬಂದ್ ಆಗಿದ್ದು ಸಂಚಾರಕ್ಕೆ ಪರದಾಡುವಂತಾಗಿದೆ.
ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗ್ತಿದೆ. ಕೊಡಗು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದಿನಿಂದ ಆಗಸ್ಟ್ 11ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಅಂಗನವಾಡಿ-ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಐಎಂಡಿ ಈ ಐದು ಜಿಲ್ಲೆಗಳಲ್ಲಿ ಆಗಸ್ಟ್ 8, ಆಗಸ್ಟ್ 9, ಆಗಸ್ಟ್ 10 ರಂದು ಆರೆಂಜ್ ಅಲರ್ಟ್ ನೀಡಿದೆ.
ದಕ್ಷಿಣ ಕನ್ನಡದ ಮುಲ್ಕಿ, ಮೂಡಬಿದಿರೆಯಲ್ಲಿ ಮಳೆ ಆರ್ಭಟ ಜೋರಾಗಿದೆ. ಉಡುಪಿ, ಕಾರ್ಕಳ, ಕೋಟಾ, ಸಿದ್ದಾಪುರದಲ್ಲೂ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಇನ್ನೂ 2 ದಿನ ಭಾರೀ ಮಳೆ ಸುರಿಯುವ ಸಾಧ್ಯತೆಯಿದ್ದು, ಯಲ್ಲೋ ಅಲರ್ಟ್ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.