ಭಾರೀ ಮಳೆ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಕಡಬ, ಸುಳ್ಯ ತಾಲೂಕಿನಲ್ಲಿ ನಿನ್ನೆಯಿಂದ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಭಾಗದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿನೇ ಕಡಬಕ್ಕೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ.ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.