ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಇಂದು NEET ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಲಿದೆ. ಎನ್ಇಇಟಿ-ಯುಜಿ (NEET-UG) ಪರೀಕ್ಷೆ ಅಕ್ರಮದ ಸಂಬಂಧ 35ಕ್ಕೂ ಹೆಚ್ಚು ಅರ್ಜಿದಾರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ ಕೆಲವರು ಪರೀಕ್ಷೆಯ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದರೆ, ಮತ್ತೆ ಕೆಲವರು ಪರೀಕ್ಷೆಯನ್ನು ಪುನಃ ನಡೆಸಲು ಆದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.