ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ರೈತರು ತಮ್ಮ ಜಮೀನುಗಳನ್ನು ಹದ ಮಾಡಿಕೊಂಡು ಬಿತ್ತನೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಆದರೆ ಮಳೆರಾಯನ ಅವಕೃಪೆಯಿಂದ ಬಿತ್ತನೆ ಮಾಡಲು ರೈತರಿಗೆ ಇನ್ನಷ್ಟು ಹಿನ್ನಡೆಯಾಗಿದೆ. ಬಿತ್ತನೆ ಬೀಜ ಮನೆಯಲ್ಲಿ ಕೊಳೆಯುತ್ತಿವೆ. ಬಳ್ಳಾರಿ ಜಿಲ್ಲೆಯನ್ನು ಬರಪೀಡತ ಜಿಲ್ಲೆಯೆಂದು ಸರ್ಕಾರ ಘೋಷಣೆ ಮಾಡಿದೆ. ಕಂದಾಯ ಅಧಿಕಾರಿಗಳು ಸಮರ್ಪಕ ಸಮೀಕ್ಷೆ ನಡೆಸಿ ರೈತರಿಗೆ ಬರ ಪರಿಹಾರ ಘೋಷಣೆ ಮಾಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಈ ಕುರಿತು ಬಳ್ಳಾರಿಯ ನಮ್ಮ ಪ್ರತಿನಿಧಿ ವೀರೇಶ್ ನಾಯಕ ರೈತರೊಂದಿಗೆ ಚಿಟ್ ಚಾಟ್ ನಡೆಸಿದ್ದಾರೆ, ಬನ್ನಿ ನೋಡೋಣ...