ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 5 ಬಾರಿ ಶಾಸಕರಾಗಿ ಹ್ಯಾಟ್ರಿಕ್ ಸಾಧಿಸಿದ ಶಿವಶಂಕರ್ ರೆಡ್ಡಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕ್ಷೇತ್ರದ ಜನ ಸೋಲಿನ ರುಚಿಯನ್ನ ತೋರಿಸಿಕೊಟ್ಟಿದ್ದಾರೆ. ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವಂತಹ ಪುಟ್ಟಸ್ವಾಮಿ ಗೌಡ 37,000ಕ್ಕೂ ಅಧಿಕ ಮತಗಳ ಅಂತರದಿಂದ ಜಯಭೇರಿ ಸಾಧಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ತೋರುವುದರ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.