ಇಂದೋರ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 90 ರನ್ಗಳಿಂದ ಗೆದ್ದು ಬೀಗಿದೆ. ಭಾರತದ ಬೃಹತ್ ಗುರಿ ಬೆನ್ನತ್ತಿದ ಕಿವೀಸ್ ಪಡೆ ಕೇವಲ 41.2 ಓವರ್ಗೆ 295 ರನ್ಗೆ ಆಲೌಟ್ ಆಗಿದೆ. ಈ ಮೂಲಕ ಒಂದು ಪಂದ್ಯವೂ ಗೆಲ್ಲದೆ ಏಕದಿನ ಸರಣಿಯನ್ನು ಟೀಂ ಇಂಡಿಯಾಗೆ ಬಿಟ್ಟುಕೊಟ್ಟಿದೆ. ಈ ಮೂಲಕ ಟೀಂ ಇಂಡಿಯಾ ಐಸಿಸಿ ರ್ಯಾಂಕಿಂಗ್ನಲ್ಲಿ ಭಾರತ ಎಲ್ಲಾ ಮೂರು ಮಾದರಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.