Viral Video: ಕೋರ್ಟ್ ಆವರಣದಲ್ಲೇ ಅತ್ತೆ-ಸೊಸೆ ಮಾರಾಮಾರಿ; ವಿಡಿಯೋ ನೋಡಿ ಹೌಹಾರಿದ ಜನರು!!

Viral Video: ಮಾಹಿತಿ ಪ್ರಕಾರ, ಕೌಟುಂಬಿಕ ಕಲಹದ ವಿಚಾರಣೆಗೆ ಹಾಜರಾಗಿದ್ದ ಅತ್ತೆ-ಸೊಸೆ ಕೋರ್ಟ್‌ನ ಆವರಣದಲ್ಲಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಇಬ್ಬರು ಪರಸ್ಪರ ನೋಡಿಕೊಂಡು ಮಾತಿನ ಚಕಮಕಿ ಶುರುವಾಗಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಇಬ್ಬರು ಹೊಡೆದಾಡಿಕೊಳ್ಳಲು ಶುರು ಮಾಡಿದ್ದಾರೆ. 

Written by - Puttaraj K Alur | Last Updated : Feb 22, 2025, 06:28 PM IST
  • ನ್ಯಾಯಾಲಯದ ಆವರಣದಲ್ಲಿಯೇ ಅತ್ತೆ-ಸೊಸೆ ನಡುವೆ ಮಾರಾಮಾರಿ
  • ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿರುವ ಘಟನೆ
  • ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿರುವ ವಿಡಿಯೋ
Viral Video: ಕೋರ್ಟ್ ಆವರಣದಲ್ಲೇ ಅತ್ತೆ-ಸೊಸೆ ಮಾರಾಮಾರಿ; ವಿಡಿಯೋ ನೋಡಿ ಹೌಹಾರಿದ ಜನರು!! title=
ಅತ್ತೆ-ಸೊಸೆ ನಡುವೆ ಮಾರಾಮಾರಿ!!

Nashik Viral Video: ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ನ್ಯಾಯಾಲಯದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಕೋರ್ಟ್ ಆವರಣದಲ್ಲೇ ಅತ್ತೆ-ಸೊಸೆ ಕುಟುಂಬಸ್ಥರ ಜೊತೆ ಸೇರಿಕೊಂಡು ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. 

ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ನ್ಯಾಯಾಲಯದ ಆವರಣದಲ್ಲಿಯೇ ಅತ್ತೆ-ಸೊಸೆ ನಡುವೆ ಮಾರಾಮಾರಿ ನಡೆದಿದೆ. @gharkekalesh ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಲಕ್ಷಾಂತರ ಜನರು ಈ ವಿಡಿಯೋವನ್ನು ವೀಕ್ಷಿಸಿದ್ದಾರೆ.   

ಇದನ್ನೂ ಓದಿಓದುವಾಗ ಫೋನ್‌ ಬಳಸಬೇಡವೆಂದು ಬುದ್ಧಿವಾದ ಹೇಳಿದ ತಾಯಿ; 17 ವರ್ಷದ ಮಗಳು ಮಾಡಿದ್ದೇನು?

ಮಾಹಿತಿ ಪ್ರಕಾರ, ಕೌಟುಂಬಿಕ ಕಲಹದ ವಿಚಾರಣೆಗೆ ಹಾಜರಾಗಿದ್ದ ಅತ್ತೆ-ಸೊಸೆ ಕೋರ್ಟ್‌ನ ಆವರಣದಲ್ಲಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಇಬ್ಬರು ಪರಸ್ಪರ ನೋಡಿಕೊಂಡು ಮಾತಿನ ಚಕಮಕಿ ಶುರುವಾಗಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಇಬ್ಬರು ಹೊಡೆದಾಡಿಕೊಳ್ಳಲು ಶುರು ಮಾಡಿದ್ದಾರೆ. ಇವರ ಜೊತೆ ಬಂದಿದ್ದ ಕುಟುಂಬಸ್ಥರು ಸಹ ಬಡಿದಾಡಿಕೊಂಡಿದ್ದಾರೆ.

ಅತ್ತೆ-ಸೊಸೆ ಜಗಳ ಬಿಡಿಸಲು ಹೋದವರಿಗೂ ಗೂಸಾ ಬಿದ್ದಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಆಧಿಕಾರಿಯೊಬ್ಬರು, ʼಸರ್ಕಾರ್‌ವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೋರ್ಟ್ ಆವರಣದಲ್ಲಿ ಹೊಡೆದಾಡಿಕೊಂಡವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ 'ಯೂಟ್ಯೂಬ್ ರಾಜಧಾನಿ' ಎಂದು ಕರೆಯುವ ಈ ಹಳ್ಳಿ ಯಾವುದು ಗೊತ್ತಾ? ಬರಿ ಯೂಟ್ಯೂಬ್ ನಿಂದಲೇ ಇಲ್ಲಿ ಹಣ ಹರಿಯುತ್ತದೆ..!

ಕೋರ್ಟ್‌ ಆವರಣದಲ್ಲಿ ಹೊಡೆದಾಡಿಕೊಂಡಿರುವ ಅತ್ತೆ-ಸೊಸೆಯ ಕುಟುಂಬಸ್ಥರನ್ನ ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಲಾಗಿದೆ. ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ಕೂಡ ನೀಡಲಾಗಿದೆ. ವಿಚಾರಣೆ ವೇಳೆ ಯಾವ ಕಾರಣಕ್ಕೆ ಅವರು ಹೊಡೆದಾಡಿಕೊಂಡರು ಅನ್ನೋದರ ಬಗ್ಗೆ ಸ್ಪಷ್ಟನೆ ನೀಡಿಲ್ಲವೆಂದು ಹೇಳಿದ್ದಾರೆ. ಈ ವಿಡಿಯೋ ನೋಡಿದ ಸಾಮಾಜಿಕ ಜಾಲತಾಣ ಬಳಕೆದಾರರು ವಿವಿಧ ರೀತಿಯಲ್ಲಿ ಫನ್ನಿ ಫನ್ನಿಯಾಗಿ ಕಾಮೆಂಟ್‌ ಮಾಡುತ್ತಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News