Gujarat Viral Video: ಗುಜರಾತ್ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹೆರಿಗೆ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಚಿಕಿತ್ಸೆ ನೀಡುವ ವಿಡಿಯೋವೊಂದು ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಹೌದು, ರಾಜಕೋಟ್ನ ಪಾಯಲ್ ಹೆರಿಗೆ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಗರ್ಭಿಣಿಯರ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯ ದೃಶ್ಯಗಳು ಲೀಕ್ ಆಗಿ, ಟೆಲಿಗ್ರಾಮ್, ಯುಟ್ಯೂಬ್ಗಳಲ್ಲಿ ಹರಿದಾಡುತ್ತಿವೆ. ಗರ್ಭಿಣಿಯರಿಗೆ ಟ್ರೀಟ್ಮೆಂಟ್ ನೀಡುತ್ತಿರುವ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುವ ಮೂಲಕ ಸಂಚಲನ ಸೃಷ್ಟಿಸಿವೆ.
ಇದನ್ನೂ ಓದಿ: ಭಾರತವು ಶೀಘ್ರದಲ್ಲೇ ಮಂಗಳ ಗ್ರಹಕ್ಕೆ ಕಾಲಿಡಲಿದೆ- ಇಸ್ರೋ ಮಾಜಿ ಮುಖ್ಯಸ್ಥ ಎ.ಎಸ್. ಕಿರಣ್ ಕುಮಾರ್
ಈ ಬಗ್ಗೆ ಮಾತನಾಡಿರುವ ಆಸ್ಪತ್ರೆಯ ನಿರ್ದೇಶಕ ಡಾ.ಅಮಿತ್ ಅಕ್ಕರಿ, ʼನಮ್ಮ ಆಸ್ಪತ್ರೆಯಲ್ಲಿ ಸಿಸಿಟಿವಿ ಸರ್ವರ್ ಹ್ಯಾಕ್ ಆಗಿದೆ. ನಾವು ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇವೆ ಮತ್ತು ತನಿಖೆಗೆ ಸಹಕರಿಸುತ್ತೇವೆʼ ಎಂದಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
CCTV footages from a private hospital in #Gujarat's #Rajkot showing women undergoing gynecological examinations and medical treatment surfaced on social media, triggering outrage and a police investigation.
The #Ahmedabad cybercrime branch, working alongside its Rajkot… pic.twitter.com/EBgluL3Nwc
— Hate Detector 🔍 (@HateDetectors) February 18, 2025
ಪಾಯಲ್ ಹೆರಿಗೆ ಆಸ್ಪತ್ರೆಯಲ್ಲಿ ನರ್ಸಿಂಗ್ ಸಿಬ್ಬಂದಿ ಗರ್ಭಿಣಿಯರಿಗೆ ಇಂಜೆಕ್ಷನ್ ನೀಡುತ್ತಿರುವ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಈ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಘಟನೆ ಕುರಿತು ಆಕ್ರೋಶ ಭುಗಿಲೆದ್ದ ಬೆನ್ನಲ್ಲಿಯೇ ಆಸ್ಪತ್ರೆಯ ನಿರ್ದೇಶಕರು ಪ್ರತಿಕ್ರಿಯೆ ನೀಡಿದ್ದಾರೆ. ತಾವು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇವೆಂದು ತಿಳಿಸಿದ್ದಾರೆ. ಅಹಮದಾಬಾದ್ನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ನಾಳೆ ಬ್ಯಾಂಕ್ ಗಳಿಗೆ ರಜೆ ಘೋಷಣೆ..! ಇಲ್ಲಿದೆ ಮಹತ್ವದ ಕಾರಣ
ರಾಜ್ಕೋಟ್ ಸೈಬರ್ ಕ್ರೈಮ್ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇಡೀ ಆಸ್ಪತ್ರೆಯ ಸಿಬ್ಬಂದಿ ವಿಚಾರಣೆಗೆ ಒಳಪಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ʼಲೀಕ್ ಆಗಿರುವ ವಿಡಿಯೋ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ವಿಡಿಯೋಗಳನ್ನು ಯಾರು, ಯಾವಾಗ ಮತ್ತು ಯಾವ ಉದ್ದೇಶಕ್ಕಾಗಿ ತೆಗೆದುಕೊಂಡಿದ್ದಾರೆ ಅನ್ನೋದರ ಬಗ್ಗೆ ನಾವು ತನಿಖೆ ಕೈಗೊಂಡಿದ್ದೇವೆ. ಸೈಬರ್ ಅಪರಾಧ ಐಟಿ ಕಾಯ್ದೆಯ ಸೆಕ್ಷನ್ 66E, 67ರಡಿ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆʼ ಅಂತಾ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.